Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:23 - ಕನ್ನಡ ಸತ್ಯವೇದವು J.V. (BSI)

23 ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು (ದೇವರಿಗೆ) ಅತಿಪ್ರಿಯ; ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿನ್ನ ವಿಜ್ಞಾಪನೆಯ ಆರಂಭದಲ್ಲೇ ದೇವರ ಅಪ್ಪಣೆಯಾಯಿತು. ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ. ನೀನು ದೇವರಿಗೆ ಅತಿ ಪ್ರಿಯನು. ಈ ದೈವೋಕ್ತಿಯನ್ನು ಆಲೋಚಿಸು; ಈ ದರ್ಶನವನ್ನು ಗ್ರಹಿಸಿಕೊ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀನು ಪ್ರಾರ್ಥಿಸಲು ಪ್ರಾರಂಭಿಸಿದಾಗಲೇ ನನಗೆ ದೇವರ ಆಜ್ಞೆಯಾಯಿತು. ನಾನು ಅದನ್ನು ನಿನಗೆ ತಿಳಿಸಲು ಬಂದಿರುವೆನು. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನೀನು ದೈವಾಜ್ಞೆಯನ್ನು ಅರಿತುಕೊಳ್ಳುವೆ ಮತ್ತು ದರ್ಶನದ ಅರ್ಥವನ್ನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀನು ವಿಜ್ಞಾಪನೆ ಮಾಡಿದ ಕೂಡಲೇ ಉತ್ತರ ಸಿಕ್ಕಿತು. ಅದನ್ನು ನಿನಗೆ ತಿಳಿಸುವುದಕ್ಕೆ ನಾನು ಬಂದಿದ್ದೇನೆ. ಏಕೆಂದರೆ ನೀನು ಅತಿ ಪ್ರಿಯನಾಗಿರುವೆ. ಆದ್ದರಿಂದ ವಿಷಯವನ್ನು ಗ್ರಹಿಸಿಕೊಂಡು ದರ್ಶನವನ್ನು ತಿಳಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:23
12 ತಿಳಿವುಗಳ ಹೋಲಿಕೆ  

ಆಮೇಲೆ ಆ ಪುರುಷನು ನನಗೆ - ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು ಎಂದು ಹೇಳಿದನು. ಅವನು ಆ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು - ಎನ್ನೊಡೆಯನೇ, ಮಾತಾಡು; ನನ್ನನ್ನು ಬಲಗೊಳಿಸಿದ್ದೀ ಎಂದರಿಕೆಮಾಡಲು


ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ)


ಆ ದೂತನು ಆಕೆಯ ಬಳಿಗೆ ಬಂದು - ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.


ನಾನು ನನ್ನ ನಲ್ಲನವಳೇ, ಅವನ ಆಶೆಯು ನನ್ನ ಮೇಲೇ ಇದೆ.


ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು ನಿನ್ನ ಸರಕುಗಳನ್ನು ಕೊಳ್ಳೆಹೊಡೆದು ನಿನ್ನ ಗೋಡೆಗಳನ್ನು ಉರುಳಿಸಿ ನಿನ್ನ ವಿನೋದಭವನಗಳನ್ನು ಕಿತ್ತುಹಾಕಿ ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.


ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ, ಸದ್ದಿಲ್ಲದೆ ಮೊರೆಯಿಡು,


ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದದರಿಂದ ಅವನು ವಿುಕ್ಕ ಮುಖ್ಯಾಧಿಕಾರಿಗಳಿಗಿಂತಲೂ ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು; ಅವನನ್ನು ರಾಜನು ಪೂರ್ಣರಾಜ್ಯದ ಮೇಲೆ ನೇವಿುಸಲು ಉದ್ದೇಶಿಸಿದನು.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನಂದರೆ - ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆಂಬದಾಗಿ ಇಸ್ರಾಯೇಲ್‍ದೇವರಾದ ಯೆಹೋವನು ಅನ್ನುತ್ತಾನೆ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.


ಪಾರಸಿಯ ರಾಜನಾದ ಕೋರೆಷನ ಆಳಿಕೆಯ ಮೂರನೆಯ ವರುಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಬಹು ಕಷ್ಟದ ಗಡುವಿನ ಆ ಸಂಗತಿಯು ಸತ್ಯ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮಂದಟ್ಟುಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು