ಧರ್ಮೋಪದೇಶಕಾಂಡ 1:10 - ಕನ್ನಡ ಸತ್ಯವೇದವು J.V. (BSI)10 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟಾದಿರಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸಂಖ್ಯೆಯಲ್ಲಿ ಹೆಚ್ಚಿಸಿದ್ದಾರೆ; ನೀವು ಆಕಾಶದ ನಕ್ಷತ್ರಗಳಷ್ಟಾಗಿದ್ದೀರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈಗ ನಿಮ್ಮ ಜನಸಂಖ್ಯೆಯು ಇನ್ನೂ ಅಧಿಕವಾಗಿರುತ್ತದೆ. ದೇವರಾದ ಯೆಹೋವನು ನಿಮ್ಮನ್ನು ವೃದ್ಧಿಪಡಿಸುತ್ತಿರುವುದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಇರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಿದ್ದಾರೆ. ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ. ಅಧ್ಯಾಯವನ್ನು ನೋಡಿ |
ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.