ಧರ್ಮೋಪದೇಶಕಾಂಡ 1:13 - ಕನ್ನಡ ಸತ್ಯವೇದವು J.V. (BSI)13 ಆದದರಿಂದ ನೀವು ಪ್ರತಿಯೊಂದು ಕುಲದಿಂದ ಪ್ರಸಿದ್ಧರಾದ ಬುದ್ಧಿವಿವೇಕವುಳ್ಳ ಪುರುಷರನ್ನು ಆರಿಸಿಕೊಳ್ಳಿರಿ; ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇವಿುಸುವೆನು ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದುದರಿಂದ ನೀವು ಪ್ರತಿಯೊಂದು ಕುಲದಿಂದ ಬುದ್ಧಿವಿವೇಕಗಳಿಂದ ಪ್ರಸಿದ್ಧರಾದ ಪುರುಷರನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇಮಿಸುವೆನು” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದುದರಿಂದ ನೀವು ಪ್ರತಿಯೊಂದು ಕುಲದಿಂದ ಜ್ಞಾನಿಗಳೂ, ವಿವೇಕಿಗಳೂ, ಪ್ರಖ್ಯಾತರೂ ಆದ ವ್ಯಕ್ತಿಗಳನ್ನು ಆರಿಸಿಕೊಳ್ಳಿ; ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇಮಿಸುತ್ತೇನೆ,’ ಎಂದು ಹೇಳಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನಿಮ್ಮನಿಮ್ಮ ಕುಲಗಳಿಂದ ಯೋಗ್ಯರಾದವರನ್ನು ಆರಿಸಿರಿ. ಅವರನ್ನು ನಿಮ್ಮ ನಾಯಕರನ್ನಾಗಿ ನೇಮಿಸುವೆನು. ಅವರು ವಿವೇಕಿಗಳಾಗಿಯೂ ಅನುಭವಶಾಲಿಗಳಾಗಿಯೂ ಇರಬೇಕು’ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ನೀವು ಪ್ರತಿಯೊಂದು ಗೋತ್ರದಿಂದ ಜ್ಞಾನಿಗಳೂ ವಿವೇಕಿಗಳೂ ಪ್ರಖ್ಯಾತರೂ ಆದ ವ್ಯಕ್ತಿಗಳನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳಾಗಿ ನೇಮಿಸುತ್ತೇನೆ,” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿ |