Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:20 - ಕನ್ನಡ ಸತ್ಯವೇದವು J.V. (BSI)

20 ಆಗ ನಾನು - ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಅಮೋರಿಯರ ಬೆಟ್ಟದ ಸೀಮೆಯ ಹತ್ತಿರಕ್ಕೆ ಬಂದಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ನಾನು, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಅಮೋರಿಯರ ಬೆಟ್ಟದ ಸೀಮೆಯ ಹತ್ತಿರಕ್ಕೆ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ನಾನು, ‘ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ಅಮೋರಿಯರ ಮಲೆನಾಡಿನ ಹತ್ತಿರಕ್ಕೆ ಬಂದಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನೀವೀಗ ಅಮೋರಿಯರ ಬೆಟ್ಟಪ್ರದೇಶಕ್ಕೆ ಬಂದಿರುವಿರಿ. ನಮ್ಮ ದೇವರಾದ ಯೆಹೋವನು ಈ ದೇಶವನ್ನು ನಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ನಾನು ನಿಮಗೆ, “ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ಅಮೋರಿಯರ ಮಲೆನಾಡಿಗೆ ಹತ್ತಿರ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:20
3 ತಿಳಿವುಗಳ ಹೋಲಿಕೆ  

ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾರಣ್ಯದಲ್ಲಿ ನಡೆದು ಕಾದೇಶ್‍ಬರ್ನೇಯಕ್ಕೆ ಸೇರಿದೆವು.


ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪಿತೃಗಳ ದೇವರಾದ ಯೆಹೋವನು ಹೇಳಿದಂತೆ ಅದನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕೆಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು