ಧರ್ಮೋಪದೇಶಕಾಂಡ 1:25 - ಕನ್ನಡ ಸತ್ಯವೇದವು J.V. (BSI)25 ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶವೆಂದು ನಮಗೆ ವರ್ತಮಾನ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶ” ಎಂದು ನಮಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅಲ್ಲಿನ ಹಣ್ಣುಹಂಪಲುಗಳಲ್ಲಿ ಕೆಲವನ್ನು ತಂದು ತೋರಿಸಿದರು; ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ಆ ನಾಡು ಒಳ್ಳೆಯ ನಾಡೆಂದು ನಮಗೆ ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅಲ್ಲಿ ಬೆಳೆಯುವ ಹಣ್ಣುಗಳನ್ನು ಕಿತ್ತು ನಮ್ಮ ಬಳಿಗೆ ತಂದರು. ಅವರು ಆ ದೇಶದ ವಿಷಯವಾಗಿ ತಿಳಿಸಿದರು. ‘ನಮ್ಮ ದೇವರಾದ ಯೆಹೋವನು ನಮಗೆ ಒಳ್ಳೆಯ ದೇಶವನ್ನು ಕೊಡುತ್ತಿದ್ದಾನೆ!’ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆ ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತೆಗೆದುಕೊಂಡು, ನಮ್ಮ ಬಳಿಗೆ ತಂದು ತೋರಿಸಿ, “ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶವು ಒಳ್ಳೆಯದು,” ಎಂದು ವರದಿಮಾಡಿದರು. ಅಧ್ಯಾಯವನ್ನು ನೋಡಿ |