Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:29 - ಕನ್ನಡ ಸತ್ಯವೇದವು J.V. (BSI)

29 ಅದಕ್ಕೆ ನಾನು - ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ನಾನು, “ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಅದಕ್ಕೆ ನಾನು, ‘ಕಳವಳಪಡಬೇಡಿ, ಅವರಿಗೆ ಭಯಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಆಗ ನಾನು, ‘ನೀವು ಕಳವಳಗೊಳ್ಳಬೇಡಿರಿ! ಆ ಜನರಿಗೆ ಭಯಪಡಬೇಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ನಾನು ನಿಮಗೆ, “ಅಂಜಬೇಡಿರಿ, ಅವರಿಗೆ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:29
9 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಅದಲ್ಲದೆ ಆ ದೇಶದ ಜನರಿಗೆ ದಿಗಿಲುಪಡಬೇಡಿರಿ; ನಾವು ಅವರನ್ನು ನುಂಗಿ ಪುಷ್ಟಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟನು; ನಮ್ಮ ಕಡೆ ಯೆಹೋವನು ಇದ್ದಾನೆ. ಅವರಿಗೆ ಭಯಪಡಬೇಡಿರಿ ಅಂದರು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ - ಆ ದೇಶದ ಜನರು ನಮಗಿಂತ ಹೆಚ್ಚಾಗಿಯೂ ಉದ್ದವಾಗಿಯೂ ಇದ್ದಾರೆ; ಅವರಿರುವ ಪಟ್ಟಣಗಳು ದೊಡ್ಡವೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಳ್ಳವೂ ಆಗಿವೆ; ಅಲ್ಲಿ ಉನ್ನತಪುರುಷರನ್ನು ನೋಡಿದೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ ಅಂದುಕೊಳ್ಳುತ್ತಿದ್ದಿರಿ.


ನಿಮ್ಮ ಮುಂದುಗಡೆಯಲ್ಲಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮ ಕಡೆಯವನಾಗಿ ಯುದ್ಧಮಾಡುವನು.


ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು.


ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ - ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ ಭಯಂಕರನೂ ಆಗಿರುವ ಕರ್ತನನ್ನು ನೆನಪು ಮಾಡಿಕೊಂಡು ನಿಮ್ಮ ಸಹೋದರರಿಗೋಸ್ಕರವೂ ಗಂಡು ಹೆಣ್ಣು ಮಕ್ಕಳಿಗೋಸ್ಕರವೂ ಹೆಂಡತಿಯರಿಗೋಸ್ಕರವೂ ನಿಮ್ಮ ಮನೆಗಳಿಗೋಸ್ಕರವೂ ಕಾದಾಡಿರಿ ಎಂದು ಹೇಳಿದೆನು.


ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಐಗುಪ್ತ್ಯರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳೂ ರಥಗಳೂ ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವದನ್ನು ಕಂಡರೆ ಹೆದರಬಾರದು. ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ .


ಅವನು - ಎಲ್ಲಾ ಯೆಹೂದ್ಯರೇ, ಯೆರೂಸಲೇವಿುನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವದನ್ನು ಕೇಳಿರಿ! ಈ ಮಹಾಸಮೂಹದ ನಿವಿುತ್ತವಾಗಿ ಕಳವಳಗೊಳ್ಳಬೇಡಿರಿ, ಹೆದರಬೇಡಿರಿ, ಯುದ್ಧವು ನಿಮ್ಮದಲ್ಲ, ದೇವರದೇ.


ನಾವು ಒಟ್ಟಾಗಿ ಯೆರೂಸಲೇವಿುನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ತಳಮಳಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು