ಧರ್ಮೋಪದೇಶಕಾಂಡ 1:30 - ಕನ್ನಡ ಸತ್ಯವೇದವು J.V. (BSI)30 ನಿಮ್ಮ ಮುಂದುಗಡೆಯಲ್ಲಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮ ಕಡೆಯವನಾಗಿ ಯುದ್ಧಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಿಮ್ಮ ಮುಂದೆ ಮಾರ್ಗದರ್ಶಕನಾಗಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ, ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮವನಾಗಿ ಯುದ್ಧಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಿಮ್ಮ ಮುಂದುಗಡೆಯಲ್ಲೇ ಹೋಗುವ ನಿಮ್ಮ ದೇವರಾದ ಸರ್ವೇಶ್ವರ ಈಜಿಪ್ಟ್ ದೇಶದಲ್ಲೂ ನೀವು ನೋಡಿದ ಮರುಭೂಮಿಯಲ್ಲೂ ಪ್ರತ್ಯಕ್ಷರಾಗಿ ನಿಮ್ಮ ಪರವಾಗಿ ಯುದ್ಧಮಾಡಿದಂತೆಯೇ, ಈಗಲೂ ನಿಮ್ಮ ಕಡೆಯವರಾಗಿದ್ದು ಯುದ್ಧಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗಿ ಅವರೊಂದಿಗೆ ಯುದ್ಧಮಾಡುವನು. ಈಜಿಪ್ಟ್‌ನಲ್ಲಿ ಆತನು ಮಾಡಿದಂತೆಯೇ ಇಲ್ಲಿಯೂ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಿಮ್ಮ ಕಣ್ಣು ಮುಂದೆ, ಯುದ್ಧಮಾಡಿದಂತೆಯೇ ಈಗಲೂ ನಿಮಗೋಸ್ಕರ ಯುದ್ಧಮಾಡುವರು. ಅಧ್ಯಾಯವನ್ನು ನೋಡಿ |