Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:33 - ಕನ್ನಡ ಸತ್ಯವೇದವು J.V. (BSI)

33 ನೀವು ಹೋಗಬೇಕಾದ ದಾರಿಯನ್ನು ತೋರಿಸುವದಕ್ಕೂ ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವದಕ್ಕೂ ರಾತ್ರಿಹೊತ್ತು ಬೆಂಕಿಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ನಿಮ್ಮ ಮುಂದುಗಡೆ ಹೋದ ದೇವರನ್ನು ನೀವು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ, ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ರಾತ್ರಿಯಲ್ಲಿ ಬೆಂಕಿಯೋಪಾದಿಯಲ್ಲಿಯೂ ಮತ್ತು ಹಗಲಿನಲ್ಲಿ ಮೇಘದೋಪಾದಿಯಲ್ಲಿಯೂ ನಿಮ್ಮ ಮಾರ್ಗದಲ್ಲಿ ನಿಮ್ಮನ್ನು ಮುನ್ನಡೆಸಿದ ದೇವರನ್ನು ನೀವು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ ಕಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ಇರುಳಲ್ಲಿ ಬೆಂಕಿಯಲ್ಲೂ ಹಗಲಲ್ಲಿ ಮೇಘದಲ್ಲೂ ನಿಮ್ಮ ಮುಂದುಗಡೆ ಹೋದ ದೇವರನ್ನು ನೀವು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನೀವು ಪ್ರಯಾಣ ಮಾಡುತ್ತಿರುವಾಗ ಆತನು ನಿಮ್ಮ ಮುಂದೆ ಹೋದನು. ತಂಗಲು ಯೋಗ್ಯವಾದ ಸ್ಥಳದಲ್ಲಿ ನೀವು ಪಾಳೆಯ ಮಾಡಿಕೊಳ್ಳುವಂತೆ ಮಾಡಿದನು. ಹಗಲಲ್ಲಿ ಮೇಘಸ್ತಂಭವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭವಾಗಿಯೂ ಆತನು ನಿಮಗೆ ಮಾರ್ಗದರ್ಶಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರೇ ನಿಮಗೆ ಇಳಿದುಕೊಳ್ಳುವುದಕ್ಕೆ ಸ್ಥಳವನ್ನು ಗೊತ್ತುಮಾಡಿ ನೀವು ಹೋಗತಕ್ಕ ಮಾರ್ಗವನ್ನು ನಿಮಗೆ ತೋರಿಸಲು ರಾತ್ರಿ ಹೊತ್ತು ಬೆಂಕಿಯಲ್ಲಿಯೂ ಹಗಲು ಹೊತ್ತು ಮೇಘದಲ್ಲಿಯೂ ನಿಮ್ಮ ಮುಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:33
16 ತಿಳಿವುಗಳ ಹೋಲಿಕೆ  

ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳುಕೊಳ್ಳತಕ್ಕ ಸ್ಥಳವನ್ನು ನೋಡುವದಕ್ಕೋಸ್ಕರ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರ ಮುಂದಾಗಿ ಹೋಗುತ್ತಿತ್ತು.


ಹಗಲು ಮೋಡದಿಂದಲೂ ಇರುಳು ಬೆಂಕಿಯ ಬೆಳಕಿನಿಂದಲೂ ಅವರನ್ನು ಕರೆದೊಯ್ದನು.


ಹಗಲುಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ ರಾತ್ರಿವೇಳೆಯಲ್ಲಿ ಅವರು ನಡೆಯ ತಕ್ಕ ದಾರಿಯಲ್ಲಿ ಬೆಳಕುಕೊಡುವದಕ್ಕೆ ಅಗ್ನಿ ಸ್ತಂಭದಲ್ಲಿಯೂ ಅವರ ಮುಂದೆ ಹೋದಿ.


ನಾನೇ ಅದರ ಸುತ್ತುಮುತ್ತಲು ಅಗ್ನಿಪ್ರಾಕಾರವೂ ಅದರೊಳಗೆ ವೈಭವವೂ ಆಗಿರುವೆನು ಎಂಬದು ಯೆಹೋವನ ನುಡಿ.


ಸಕಲದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು ಎಂದು ಪ್ರಮಾಣಮಾಡಿ


ಅವರಿಗೆ [ಹಗಲಲ್ಲಿ] ನೆರಳಿಗೋಸ್ಕರ ಮೋಡವನ್ನೂ ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಮೇಲೆ ಹರವಿದನು.


ಅದಲ್ಲದೆ ಈ ದೇಶದವರು ನೀನು ಇಸ್ರಾಯೇಲ್ಯರ ಮಧ್ಯದಲ್ಲಿ ಇರುವ ಸಂಗತಿಯನ್ನು ಕೇಳಿದ್ದಾರೆ. ಹೇಗಂದರೆ ಯೆಹೋವನೇ, ನೀನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವವನಾಗಿ ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುತ್ತೀಯಲ್ಲಾ ; ಅದಲ್ಲದೆ ನೀನಿರುವ ಮೇಘವು ಇಸ್ರಾಯೇಲ್ಯರ ಮೇಲೆ ಇದೆಯಲ್ಲಾ.


ಕುರುಬನು ಕುರಿಹಿಂಡನ್ನು ಹೇಗೋ ಹಾಗೆ ನೀನು ಮೋಶೆ ಆರೋನರ ಮುಖಾಂತರ ನಿನ್ನ ಪ್ರಜೆಯನ್ನು ಕರೆದೊಯ್ದಿ.


ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿಮೇಘಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದನು.


ಇದು ಯೆಹೋವನ ನುಡಿ - ಹತಶೇಷವಾದ ಜನಕ್ಕೆ ಅರಣ್ಯದಲ್ಲಿ ದಯೆದೊರೆಯುವದು; ಇಸ್ರಾಯೇಲು ವಿಶ್ರಾಂತಿಯನ್ನು ಹುಡುಕುವದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು ಹೀಗನ್ನುವನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು