Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:8 - ಕನ್ನಡ ಸತ್ಯವೇದವು J.V. (BSI)

8 ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:8
39 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು.


ದೇವರು ಅಬ್ರಹಾಮನಿಗೆ ವಾಗ್ದಾನಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದರಿಂದ ತನ್ನಾಣೆಯಿಟ್ಟು -


ನಿಜವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು, ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.


ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗೆ ನೇವಿುಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಐಗುಪ್ತದೇಶದಿಂದ ಕರತಂದ ಜನರನ್ನು ನಿನ್ನ ಸಂಗಡ ಕರಕೊಂಡು ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ - ನಿಮ್ಮ ಸಂತತಿಯವರಿಗೆ ಕೊಡುವೆನೆಂದು ಪ್ರಮಾಣ ಮಾಡಿ ಕೊಟ್ಟ ದೇಶಕ್ಕೆ ಹೊರಟುಹೋಗು.


ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವದಿಲ್ಲ.


ಐಗುಪ್ತದೇಶದೊಳಗಿಂದ ಬಂದ ಈ ಜನರೊಳಗೆ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದದರಿಂದ ಅವರೊಳಗೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸಿನವರಲ್ಲಿ ಅವರಿಬ್ಬರೇ ಹೊರತಾಗಿ ಒಬ್ಬನಾದರೂ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ನೋಡುವದೇ ಇಲ್ಲ ಎಂದು ಖಂಡಿತವಾಗಿ ಹೇಳಿದನು.


ನೀವು ಈಗ ಇರುವದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ ತಾನು ವಾಗ್ದಾನ ಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.


ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳೂ ನಿಮಗಾಗುವವು; ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವದು.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದಿ.


ಅವರ ಪಿತೃಗಳಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ;


ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ; ಇದು ನಿಮಗೆ ಸ್ವಾಸ್ತ್ಯವಾಗಿಯೇ ಇರುವದು.


ನಾವು ಯೊರ್ದನ್ ಹೊಳೆಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲವೆಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆನು.


ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ


ಯೆಹೋವನು ನಿಮ್ಮನ್ನು ಪ್ರೀತಿಸಿ ತಾನು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿ ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ನಿಮ್ಮಲ್ಲಿ ನೆರವೇರಿಸುವವನಾಗಿ


ನಿಮ್ಮನ್ನು ಪ್ರೀತಿಸಿ ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ ವ್ಯವಸಾಯವನ್ನೂ ನಿಮಗಿರುವ ಧಾನ್ಯದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ನಿಮ್ಮ ದನಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.


ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚಿ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ತರುವಾಯ ಯೆಹೋವನು ನನಗೆ - ನೀನು ಈ ಜನರ ಮುಂದುಗಡೆಯಲ್ಲಿ ಹೊರಡು; ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ ಎಂದು ಆಜ್ಞಾಪಿಸಿದನು.


ಮತ್ತು ಯೆಹೋವನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕಿಕೊಳ್ಳುವಿರಿ; ಅದು ಹಾಲೂ ಜೇನೂ ಹರಿಯುವ ದೇಶ.


ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ - ಯೆಹೋವನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ಈಗ ಒಪ್ಪಿಕೊಂಡಿದ್ದೇವೆ ಎಂದು ಹೇಳಬೇಕು.


ನೀನು ನಿನ್ನ ಪರಿಶುದ್ಧವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ ನಿನ್ನ ಜನರಾದ ಇಸ್ರಾಯೇಲ್ಯರನ್ನೂ ಹಾಲೂ ಜೇನೂ ಹರಿಯುವ ದೇಶವೆಂದು ನೀನು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂವಿುಯನ್ನೂ ಆಶೀರ್ವದಿಸು ದೇವರೇ ಎಂದು ಹೇಳಬೇಕು.


ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮಗೆ ಸಂತಾನಪಶುವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವನು.


ನೀವೆಲ್ಲರೂ ಈ ಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವದಕ್ಕೆ ಕಾರಣವೇನಂದರೆ - ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆಯೂ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ವಾಗ್ದಾನಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವದಕ್ಕೋಸ್ಕರ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ; ನೀವು ಅದಕ್ಕೆ ಸೇರುವದಕ್ಕಾಗಿ ಕೂಡಿಬಂದಿದ್ದೀರಿ.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾತಿಗೆ ವಿಧೇಯರಾಗಿರ್ರಿ, ಆತನನ್ನು ಹೊಂದಿಕೊಂಡೇ ಇರ್ರಿ. ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವದಕ್ಕೂ ಬಹುಕಾಲ ಇರುವದಕ್ಕೂ ಆತನೇ ಆಧಾರ.


ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲ್ಯರೆಲ್ಲರ ಮುಂದೆ ಅವನಿಗೆ - ಯೆಹೋವನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದದರಿಂದ ಶೂರನಾಗಿ ಧೈರ್ಯದಿಂದಿರು;


ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ಹೊಳೆದಾಟಿ ಅಲ್ಲಿಗೆ ಹೋಗಕೂಡದೆಂದು ಹೇಳಿದನು.


ನಿನ್ನನ್ನು ಕೈಬಿಡುವದಿಲ್ಲ, ತೊರೆಯುವದಿಲ್ಲ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಯಾಕಂದರೆ ನಾನು ಈ ಜನರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶವನ್ನು ಇವರಿಗೆ ನೀನೇ ಸ್ವಾಧೀನಪಡಿಸಬೇಕು.


ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀವಿುಗೆ ಬಂದು ಇಸ್ರಾಯೇಲ್ಯರಿಗೆ - ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವದಿಲ್ಲವೆಂದು ನಾನು ಮಾತು ಕೊಟ್ಟಾಗ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು