Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:10 - ಕನ್ನಡ ಸತ್ಯವೇದವು J.V. (BSI)

10 ನಾನು ಮುಂಚಿನಂತೆ ಹಗಲಿರುಳು ನಾಲ್ವತ್ತು ದಿನವು ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶ ಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನಾನು ಮುಂಚಿನಂತೆ ಹಗಲಿರುಳು ನಲವತ್ತು ದಿನವೂ ಬೆಟ್ಟದ ಮೇಲೆ ಇದ್ದೆ. ಸರ್ವೇಶ್ವರ ಆ ಕಾಲದಲ್ಲೂ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಹಿಂದಿನ ಪ್ರಕಾರ ಈ ಸಾರಿಯೂ ನಾನು ನಲವತ್ತು ದಿನ ಹಗಲಿರುಳು ಬೆಟ್ಟದ ಮೇಲಿದ್ದೆನು. ನನ್ನ ಮಾತುಗಳನ್ನು ಯೆಹೋವನು ಆಲೈಸಿದನು; ನಿಮ್ಮನ್ನು ನಾಶಮಾಡುವುದಿಲ್ಲವೆಂದು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ನಾನು ಮೊದಲಿನಂತೆ ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿ ನಿಂತೆನು. ಯೆಹೋವ ದೇವರು ಆ ಕಾಲದಲ್ಲಿ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:10
10 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮನ್ನು ನಾಶ ಮಾಡಬೇಕೆಂದಿದ್ದದರಿಂದ ನಾನು ಆ ನಾಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.


ಮೋಶೆ ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರಳು ನಾಲ್ವತ್ತು ದಿನ ಇದ್ದನು. ಅವನು ಏನೂ ಊಟಮಾಡಲಿಲ್ಲ, ಏನೂ ಕುಡಿಯಲಿಲ್ಲ. ಆತನು ನಿಬಂಧನದ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಿಗೆಗಳ ಮೇಲೆ ಬರೆದನು.


ಯೆಹೋವನು ಮೋಶೆಗೆ - ನಿನಗೆ ನನ್ನ ಅನುಗ್ರಹ ದೊರಕಿದ್ದರಿಂದಲೂ ನಾನು ನಿನ್ನ ಹೆಸರನ್ನು ಗೊತ್ತುಮಾಡಿದ್ದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು ಎಂದು ಹೇಳಿದನು.


ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ರಕ್ಷಿಸಿಕೊಳ್ಳಲಾರನು. ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಟ್ಟೇವು.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬೇರೆ ಮಾಡಿಕೊಂಡನು.


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ಹಗಲಿರುಳು ನಾಲ್ವತ್ತು ದಿವಸ ಇದ್ದನು.


ತರುವಾಯ ಯೆಹೋವನು ನನಗೆ - ನೀನು ಈ ಜನರ ಮುಂದುಗಡೆಯಲ್ಲಿ ಹೊರಡು; ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು