Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:13 - ಕನ್ನಡ ಸತ್ಯವೇದವು J.V. (BSI)

13 ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವದನ್ನೇ ಹೊರತು ನಿಮ್ಮ ದೇವರಾದ ಯೆಹೋವನು ನಿವ್ಮಿುಂದ ಬೇರೇನು ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ನಿಮ್ಮ ಒಳಿತಿಗಾಗಿ ಈಗ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಬರಬೇಕು. ಇಷ್ಟನ್ನೇ ಹೊರತು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮಿಂದ ಬೇರೇನನ್ನು ಕೇಳಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ನಾನು ನಿಮಗೆ ಕೊಡುವ ಆತನ ಕಟ್ಟಳೆ, ವಿಧಿನಿಯಮಗಳಿಗೆ ವಿಧೇಯರಾಗಿರಿ. ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಈ ಹೊತ್ತು ನಿಮ್ಮ ಮೇಲಿಗಾಗಿ ನಿಮಗೆ ಆಜ್ಞಾಪಿಸುವ ಯೆಹೋವ ದೇವರ ಆಜ್ಞೆಗಳನ್ನೂ ಅವರ ನಿಮಯಗಳನ್ನೂ ಕಾಪಾಡುವುದೇ ಹೊರತು, ಮತ್ತೇನೂ ನಮ್ಮ ದೇವರಾಗಿರುವ ಯೆಹೋವ ದೇವರು ನಿಮ್ಮಿಂದ ಕೇಳುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:13
7 ತಿಳಿವುಗಳ ಹೋಲಿಕೆ  

ನಾನು ಅವರ ಹಿತವನ್ನೂ ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ ಆತನು ಇಂದಿನಂತೆ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯ ಭಕ್ತಿಯುಳ್ಳವರಾಗಿರಬೇಕು.


ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.


ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.


ಆದದರಿಂದ ಇಸ್ರಾಯೇಲ್ಯರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ ಆತನನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡುತ್ತಾ


ಉನ್ನತೋನ್ನತವಾದ ಆಕಾಶಮಂಡಲವೂ ಮತ್ತು ಭೂವಿುಯೂ ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ;


ಸೊಲೊಮೋನನು ಯೆಹೋವನನ್ನು ಪ್ರೀತಿಸಿ ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವರ್ಪಿಸುತ್ತಿದ್ದನು; ಅಲ್ಲಿಯೇ ಧೂಪಸುಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು