ಧರ್ಮೋಪದೇಶಕಾಂಡ 10:14 - ಕನ್ನಡ ಸತ್ಯವೇದವು J.V. (BSI)14 ಉನ್ನತೋನ್ನತವಾದ ಆಕಾಶಮಂಡಲವೂ ಮತ್ತು ಭೂವಿುಯೂ ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಗೋ ಕೇಳಿ: ಉನ್ನತೋನ್ನತವಾದ ಆಕಾಶಮಂಡಲವು, ಭೂಮಿಯು ಹಾಗು ಅದರಲ್ಲಿರುವ ಎಲ್ಲವು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಪ್ರತಿಯೊಂದೂ ಯೆಹೋವನದೇ, ಉನ್ನತವಾದ ಆಕಾಶವೂ ಯೆಹೋವನದೇ. ಈ ಭೂಮಿಯೂ, ಅದರಲ್ಲಿರುವ ಸಮಸ್ತವೂ ದೇವರಿಗೇ ಸೇರಿದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಕಾಶವೂ ಉನ್ನತಾಕಾಶವೂ ಭೂಮಿಯೂ ಅದರಲ್ಲಿರುವಂಥಾದ್ದೆಲ್ಲವೂ ನಿಮ್ಮ ದೇವರಾಗಿರುವ ಯೆಹೋವ ದೇವರವುಗಳೇ. ಅಧ್ಯಾಯವನ್ನು ನೋಡಿ |
ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.