ಧರ್ಮೋಪದೇಶಕಾಂಡ 10:15 - ಕನ್ನಡ ಸತ್ಯವೇದವು J.V. (BSI)15 ಆದರೂ ಆತನು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೂ ಅವರು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವರಾಗಿ ಅವರನ್ನು ಪ್ರೀತಿಸಿದರು. ಈಗ ನಿಮ್ಮ ಅನುಭವಕ್ಕೆ ಬಂದಿರುವಂತೆ, ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲ ಜನಾಂಗಗಳಿಂದ ಆರಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನು ನಿಮ್ಮ ಪೂರ್ವಿಕರನ್ನು ಎಷ್ಟು ಪ್ರೀತಿಮಾಡಿದ್ದನೆಂದರೆ, ಅವರ ಸಂತಾನದವರಾದ ನಿಮ್ಮನ್ನು ತನ್ನ ಜನರನ್ನಾಗಿ ಆರಿಸಿಕೊಳ್ಳುವಷ್ಟು ಪ್ರೀತಿಸಿದನು; ಬೇರೆ ಜನಾಂಗದವರ ಬದಲಾಗಿ ನಿಮ್ಮನ್ನೇ ಆರಿಸಿಕೊಂಡನು. ನೀವು ಇಂದಿಗೂ ಆತನಿಂದ ಆರಿಸಲ್ಪಟ್ಟ ಜನರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮ ಪಿತೃಗಳ ಮೇಲೆ ಯೆಹೋವ ದೇವರು ತಾವೇ ಮನಸ್ಸಿಟ್ಟು, ಅವರನ್ನು ಪ್ರೀತಿಸಿ, ಅವರ ಸಂತಾನವಾಗಿರುವ ನಿಮ್ಮನ್ನು ಈ ಹೊತ್ತು ಇರುವ ಪ್ರಕಾರ ಎಲ್ಲಾ ಜನರೊಳಗಿಂದ ಆರಿಸಿಕೊಂಡರು. ಅಧ್ಯಾಯವನ್ನು ನೋಡಿ |