Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:16 - ಕನ್ನಡ ಸತ್ಯವೇದವು J.V. (BSI)

16 ಆದದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಸ್ವಭಾವವನ್ನು ಬಿಟ್ಟುಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ಅವರ ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಆದ್ದರಿಂದ ಹಠಮಾರಿಗಳಾಗಬೇಡಿರಿ. ನಿಮ್ಮ ಹೃದಯಗಳನ್ನು ಯೆಹೋವನಿಗೆ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:16
13 ತಿಳಿವುಗಳ ಹೋಲಿಕೆ  

ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೇ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ನಾನು ತಮಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶಕ್ಕೆ [ಸೆರೆಯವರನ್ನಾಗಿ] ಬರಮಾಡಬೇಕಾಯಿತೆಂದೂ ಒಪ್ಪಿ ತಮ್ಮ ಮೊಂಡವಾದ ಮನಸ್ಸನ್ನು ನನ್ನ ಆಜ್ಞೆಗೆ ಒಳಪಡಿಸಿ, ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವದಾದರೆ


ಆತನು ಎಲ್ಲಾ ದೊರೆತನಗಳಿಗೂ ಅಧಿಕಾರಿಗಳಿಗೂ ಶಿರಸ್ಸು. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದಿರಿ; ಈ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಇದು ಪಾಪಾಧೀನಸ್ವಭಾವವನ್ನು ವಿಸರ್ಜಿಸುವದೇ; ಇದೇ ಕ್ರಿಸ್ತೀಯ ಸುನ್ನತಿ;


ನಿಮ್ಮ ದೇವರಾದ ಯೆಹೋವನು ಆ ಉತ್ತಮದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.


ಅದಲ್ಲದೆ ಆತನು ನನಗೆ - ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಒಳಗಾಗದವರು.


ನೀವು ಮಾನಸ್ಥಾನದಲ್ಲಿ ಸುನ್ನತಿ ಮಾಡಿಸಿಕೊಳ್ಳಬೇಕು; ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತು.


ಇಸ್ರಾಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಫರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಹೊಲೆಗೆಡಿಸಿ ನನ್ನ ಒಡಂಬಡಿಕೆಯನ್ನು ಭಂಗಪಡಿಸಿ ನಿಮ್ಮ ಅವಿುತದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ;


ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು