Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:17 - ಕನ್ನಡ ಸತ್ಯವೇದವು J.V. (BSI)

17 ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:17
33 ತಿಳಿವುಗಳ ಹೋಲಿಕೆ  

ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ -


ದೇವರಿಗೆ ಪಕ್ಷಪಾತವಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಆದರೆ ಧರ್ಮಶಾಸ್ತ್ರವುಳ್ಳವರಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.


ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರು ಮುಖದಾಕ್ಷಿಣ್ಯ ಮಾಡುವವನಲ್ಲ. ಮಾನಿಷ್ಠರೆನಿಸಿಕೊಂಡವರು ನನ್ನ ಮಾತಿಗೆ ಒಪ್ಪಿದರೇ ಹೊರತು ನನಗೇನೂ ಕಲಿಸಲಿಲ್ಲ.


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ.


ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ಭಯಂಕರನಾದ ಮಹಾದೇವರು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ಯಜಮಾನರೇ, ನಿಮ್ಮ ಕೈಕೆಳಗಿರುವ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆಯಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.


ಇದಕ್ಕೆ ಸಾಕ್ಷಿ; ದೇವದೇವನಾದ ಯೆಹೋವನಿಗೆ ಇದು ಗೊತ್ತುಂಟು. ಇಸ್ರಾಯೇಲ್ಯರಿಗೂ ಗೊತ್ತಾಗುವದು. ನಾವು ದ್ರೋಹಿಗಳೂ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರೂ ಆಗಿದ್ದರೆ ಆತನು ನಮ್ಮನ್ನು ಈ ಹೊತ್ತೇ ಕೈಬಿಡಲಿ.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ಅವರು ಯೆಹೋವನ ಪೂಜ್ಯವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.


ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು.


ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ - ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ ಭಯಂಕರನೂ ಆಗಿರುವ ಕರ್ತನನ್ನು ನೆನಪು ಮಾಡಿಕೊಂಡು ನಿಮ್ಮ ಸಹೋದರರಿಗೋಸ್ಕರವೂ ಗಂಡು ಹೆಣ್ಣು ಮಕ್ಕಳಿಗೋಸ್ಕರವೂ ಹೆಂಡತಿಯರಿಗೋಸ್ಕರವೂ ನಿಮ್ಮ ಮನೆಗಳಿಗೋಸ್ಕರವೂ ಕಾದಾಡಿರಿ ಎಂದು ಹೇಳಿದೆನು.


ಹೀಗಿರುವಲ್ಲಿ ನಿಮಗೆ ಯೆಹೋವನ ಭಯವು ಇರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ ಮುಖದಾಕ್ಷಿಣ್ಯವೂ ಲಂಚತಿನ್ನುವದೂ ಇಲ್ಲವಾದದರಿಂದ ಜಾಗರೂಕತೆಯಿಂದ ಕೆಲಸಮಾಡಿರಿ ಎಂದು ಎಚ್ಚರಿಸಿದನು.


ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.


ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವನಷ್ಟೆ; ಪಕ್ಷಪಾತವಿರುವದಿಲ್ಲ.


ಇವರು ಬಂದು - ಬೋಧಕನೇ, ನೀನು ಸತ್ಯವಂತನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ,


ಭಾಗ್ಯವಂತನಾದ ಏಕಾಧಿಪತಿಯು ತನ್ನ ಕ್ಲುಪ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು ರಾಜಾಧಿರಾಜನೂ ಕರ್ತರ ಕರ್ತನೂ


ಲಂಚವನ್ನು ತೆಗೆದುಕೊಳ್ಳಬಾರದು; ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಯಾದವನ ನ್ಯಾಯವನ್ನು ಕೆಡಿಸುತ್ತದೆ.


ನ್ಯಾಯವಿಚಾರಿಸುವಾಗ ಮುಖದಾಕ್ಷಿಣ್ಯಮಾಡದೆ ಅಧಿಕರನ್ನೂ ಅಲ್ಪರನ್ನೂ ಸಮನಾಗಿ ತಿಳಿಯಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು ಎಂದು ಹೇಳಿದೆನು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ಅವರು - ಹಣತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


[ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ ತಾಮ್ರ ಮಣ್ಣು ಬೆಳ್ಳಿ ಬಂಗಾರಗಳನ್ನು ಚೂರುಚೂರುಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ; ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ; ಕನಸು ನಿಜ, ಅದರ ಅರ್ಥವು ನಂಬತಕ್ಕದು ಎಂದು ಹೇಳಿದನು.


ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ; ನೀನು ಮಹಾ ಪರಾಕ್ರವಿುಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬದು ನಿನ್ನ ನಾಮಧೇಯ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು