Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:2 - ಕನ್ನಡ ಸತ್ಯವೇದವು J.V. (BSI)

2 ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೀನು ಒಡೆದುಬಿಟ್ಟ ಆ ಮೊದಲಿನ ಹಲಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕು’ ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಒಡೆದುಹಾಕಿದ ಮೊದಲಿನ ಕಲ್ಲು ಹಲಗೆಗಳ ಮೇಲೆ ಯಾವ ಪದಗಳನ್ನು ಬರೆದಿದ್ದೆನೋ ಅದೇ ಪದಗಳನ್ನು ಈ ಕಲ್ಲಿನ ಹಲಗೆಗಳ ಮೇಲೆ ಬರೆಯುತ್ತೇನೆ. ಈ ಹೊಸ ಕಲ್ಲಿನ ಹಲಗೆಗಳನ್ನು ನೀನು ಮರದ ಪೆಟ್ಟಿಗೆಯಲ್ಲಿಡಬೇಕು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು. ಆಮೇಲೆ ನೀನು ಅವುಗಳನ್ನು ಮಂಜೂಷದಲ್ಲಿ ಇಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:2
9 ತಿಳಿವುಗಳ ಹೋಲಿಕೆ  

ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;


ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಅವೆ.


ನೀವು ಅನುಸರಿಸಬೇಕೆಂದು ಆತನು ನೇವಿುಸಿದ ನಿಬಂಧನೆಯನ್ನು ಅಂದರೆ ಹತ್ತು ಕಟ್ಟಳೆಗಳನ್ನು ನಿಮಗೆ ವಿವರಿಸಿ ಎರಡುಕಲ್ಲಿನ ಹಲಗೆಗಳಲ್ಲಿ ಕೆತ್ತಿಸಿದ್ದೂ;


ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಕೊಟ್ಟು


ಯೆಹೋವನು ಮೋಶೆಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಇನ್ನು ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಿಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು.


ಅದರಲ್ಲಿ ಎರಡು ಕಲ್ಲಿನ ಹಲಿಗೆಗಳು ಹೊರತಾಗಿ ಬೇರೇನೂ ಇರಲಿಲ್ಲ; ಯೆಹೋವನು ಐಗುಪ್ತದೇಶದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.


ಅವನು ಪಾಳೆಯದ ಹತ್ತಿರಕ್ಕೆ ಬಂದು ಆ ಬಸವನನ್ನೂ ಜನರು ಕುಣಿದಾಡುವದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡದಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು