Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:3 - ಕನ್ನಡ ಸತ್ಯವೇದವು J.V. (BSI)

3 ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದಕಾರಣ, ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ, ಮೊದಲಿನ ಕಲ್ಲಿನ ಹಲಗೆಗಳಂತೆ ಬೇರೆ ಎರಡು ಹಲಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು, ಬೆಟ್ಟವನ್ನು ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಾನು ಜಾಲೀಮರದಿಂದ ಪೆಟ್ಟಿಗೆಯನ್ನು ಮಾಡಿದೆನು. ಎರಡು ಕಲ್ಲಿನ ಹಲಗೆಗಳನ್ನು ತಯಾರಿಸಿ ಬೆಟ್ಟವನ್ನೇರಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ಪ್ರಕಾರ ನಾನು ಜಾಲಿ ಮರದ ಮಂಜೂಷವನ್ನು ಮಾಡಿ, ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳಂತೆ ಕೆತ್ತಿ, ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನೇರಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:3
7 ತಿಳಿವುಗಳ ಹೋಲಿಕೆ  

ಆದಕಾರಣ ಮೋಶೆ ಮೊದಲಿದ್ದ ಹಲಿಗೆಗಳಂತೆ ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೊಂಡು ಯೆಹೋವನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಿಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.


ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿರಬೇಕು.


ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳೂ ಕಡಲು ಹಂದಿಯ ತೊಗಲುಗಳೂ ಜಾಲೀಮರವೂ


ಆ ಕಾಲದಲ್ಲಿ ಯೆಹೋವನು ನನಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;


ವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿ ತಾಮ್ರದ ತಗಡುಗಳನ್ನು ಹೊದಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು