Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:11 - ಕನ್ನಡ ಸತ್ಯವೇದವು J.V. (BSI)

11 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವೋ ಹಳ್ಳದಿನ್ನೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡೋ ಹಳ್ಳದಿಣ್ಣೆಗಳ ನಾಡು; ಆಕಾಶದಿಂದ ಮಳೆಬಿದ್ದಂತೆ ನೀರುದೊರಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿಮಗೆ ಶೀಘ್ರದಲ್ಲಿಯೇ ದೊರಕಲಿರುವ ಭೂಮಿ ಅಂಥದ್ದಲ್ಲ. ಅದು ಬೆಟ್ಟತಗ್ಗುಗಳ ಪ್ರಾಂತ್ಯ; ಮಳೆಯ ನೀರು ಭೂಮಿಯನ್ನು ತೊಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು ಬೆಟ್ಟಗಳೂ, ತಗ್ಗುಗಳೂ ಉಳ್ಳ ದೇಶವೇ; ಆಕಾಶದ ಮಳೆಯಿಂದ ಅದಕ್ಕೆ ನೀರು ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:11
10 ತಿಳಿವುಗಳ ಹೋಲಿಕೆ  

ಭೂವಿುಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿವಿುತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;


ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂವಿುಯನ್ನೂ ಕೊಟ್ಟು ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರತಂದು ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆನು; ಆದರೆ ನೀವು ಪ್ರವೇಶಿಸಿ ಆ ನನ್ನ ದೇಶವನ್ನು ಹೊಲೆಮಾಡಿ ನನ್ನ ಸ್ವಾಸ್ತ್ಯವನ್ನು ಅಸಹ್ಯಪಡಿಸಿದಿರಿ.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!


ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.


ದೇವರೇ, ನೀನು ಹೇರಳ ಮಳೆಸುರಿಸಿ ಬಾಯ್ದೆರೆದಿದ್ದ ನಿನ್ನ ಸ್ವಾಸ್ತ್ಯವನ್ನು ಶಾಂತಿಪಡಿಸಿದಿ.


ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯಗಳನ್ನು ಕೇಳಿರಿ - ಬೆಟ್ಟಗುಡ್ಡ ತೊರೆತಗ್ಗುಗಳಿಗೂ ಕಾಡಾದ ಹಾಳುಪ್ರದೇಶಗಳಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ ಯೆಹೋವಕರ್ತನು ಹೀಗೆ ನುಡಿಯುತ್ತಾನೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು