Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:13 - ಕನ್ನಡ ಸತ್ಯವೇದವು J.V. (BSI)

13 ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ಲಕ್ಷ್ಯಕೊಟ್ಟು ನಿಮ್ಮ ದೇವರಾದ ಸರ್ವೇಶ್ವರನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಅವರಿಗೆ ಸೇವೆಸಲ್ಲಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಯೆಹೋವನು ಹೀಗೆನ್ನುತ್ತಾನೆ: ‘ಇಂದು ನಾನು ನಿಮಗೆ ಕೊಟ್ಟ ಆಜ್ಞೆಗಳನ್ನೆಲ್ಲ ಗಮನವಿಟ್ಟು ಕೇಳಿರಿ: ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕು. ಹೀಗೆ ಮಾಡಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗಾದರೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಯಕೊಟ್ಟು ಕೇಳಿ, ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ ಅವರಿಗೆ ಸೇವೆ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:13
16 ತಿಳಿವುಗಳ ಹೋಲಿಕೆ  

ಆದದರಿಂದ ಇಸ್ರಾಯೇಲ್ಯರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ ಆತನನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡುತ್ತಾ


ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ಹೊಳೆ ದಾಟಿ ಆಚೆಯಿರುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ;


ನಿಮ್ಮ ದೇವರಾದ ಯೆಹೋವನು ನಿಮಗೆ ನೇವಿುಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು.


ನಿನ್ನ ನೇಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡಿಸಬೇಕೆಂದು ನೀನೇ ಆಜ್ಞಾಪಿಸಿರುತ್ತೀ.


ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು ಆತನನ್ನೇ ಹೊಂದಿಕೊಂಡಿದ್ದರೆ


ನೀವು ನನ್ನ ನಿಯಮಗಳನ್ನು ಕೈಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ


ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ನಿಮ್ಮಲ್ಲಿ ನೆರವೇರಿಸುವವನಾಗಿ


ಆದದರಿಂದ ನಿಮ್ಮ ದೇವರಾದ ಯೆಹೋವನಲ್ಲಿ ಪ್ರೀತಿಯಿಟ್ಟು ಆತನ ನಿಯಮಗಳನ್ನು ಕೈಕೊಂಡು ಆತನ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ ಆತನು ಭೂವಿುಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವರ್ಪಿಸುತ್ತಿದ್ದನು; ಅಲ್ಲಿಯೇ ಧೂಪಸುಡುತ್ತಿದ್ದನು.


ಆತನ ಕಟ್ಟಳೆಗಳನ್ನು ಕೈಕೊಂಡು ಸಂಪೂರ್ಣಮನಸ್ಸಿನಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ಯೆಹೋವನಾದ ನನ್ನ ನುಡಿ ಇದೇ - ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ ಯಾವ ಕೆಲಸವನ್ನೂ ಮಾಡದೆ ಆ ದಿನವನ್ನು ನನ್ನ ದಿನವೆಂದು ಆಚರಿಸಿದರೆ


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು.


ನಾನು ಮುಂಗಾರು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೇ ಬೆಳೆಯನ್ನು ಕೊಡುವವು, ತೋಟದ ಮರಗಳು ಬಹಳ ಫಲಕೊಡುವವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು