Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:28 - ಕನ್ನಡ ಸತ್ಯವೇದವು J.V. (BSI)

28 ಈ ಆಜ್ಞೆಗಳಿಗೆ ವಿಧೇಯರಾಗದೆ ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಈ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ, ನಿಮಗೆ ಶಾಪ ತಗಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ನೀವು ವಿಧೇಯರಾಗದಿದ್ದರೆ ಶಾಪವನ್ನು ಹೊಂದುವಿರಿ. ನಾನು ನಿಮಗೆ ಕೊಡುವ ಯೆಹೋವನ ನಿಯಮಗಳನ್ನು ಅನುಸರಿಸುವುದನ್ನು ನಿಲ್ಲಿಸಬೇಡಿರಿ. ಅನ್ಯದೇವತೆಗಳನ್ನು ಪೂಜಿಸಬೇಡಿರಿ. ನಾನು ನಿಮಗೆ ಬೋಧಿಸುತ್ತಿರುವುದು ಯೆಹೋವನ ಮಾರ್ಗದ ಕುರಿತೇ ಹೊರತು ಬೇರೆ ದೇವರುಗಳ ಕುರಿತಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾದರೆ, ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ, ನಿಮಗೆ ಶಾಪವು ತಗಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:28
10 ತಿಳಿವುಗಳ ಹೋಲಿಕೆ  

ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ಧರ್ಮಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು ಶಾಸ್ತ್ರದಲ್ಲಿ ಬರೆದದೆ.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ಒಪ್ಪದೆ ತಿರುಗಿ ಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಈ ಮಾತು ಯೆಹೋವನೇ ನುಡಿದದ್ದು.


ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.


ಪರದೇಶಿಯನ್ನಾಗಲಿ ಅನಾಥನನ್ನಾಗಲಿ ವಿಧವೆಯನ್ನಾಗಲಿ ಹಿಂಸಿಸದೆ ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ ನಿಮಗೆ ಹಾನಿಕರವಾದ ಅನ್ಯದೇವತಾಭಕ್ತಿಯನ್ನು ಮಾಡದೆ ಇದ್ದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು