ಧರ್ಮೋಪದೇಶಕಾಂಡ 11:29 - ಕನ್ನಡ ಸತ್ಯವೇದವು J.V. (BSI)29 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ದೇವರಾದ ಯೆಹೋವನು ನಿಮ್ಮನ್ನು ನಿಮ್ಮ ದೇಶಕ್ಕೆ ನಡೆಸುವನು. ನೀವು ಬೇಗನೆ ಅದನ್ನು ಸ್ವಾಧೀನ ಮಾಡಿಕೊಳ್ಳುವಿರಿ. ಆ ಸಮಯದಲ್ಲಿ ನೀವು ಗೆರಿಜ್ಜೀಮ್ ಬೆಟ್ಟದ ತುದಿಗೇರಿ ಅಲ್ಲಿಂದ ಆಶೀರ್ವಾದ ವಚನಗಳನ್ನು ನುಡಿಯಿರಿ. ಅನಂತರ ನೀವು ಎಬಾಲ್ ಬೆಟ್ಟದ ಮೇಲೇರಿ ಅಲ್ಲಿಂದ ಜನರಿಗೆ ಶಾಪವಚನಗಳನ್ನು ನುಡಿಯಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರವೇಶಿಸುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೇರಿಸಿದಾಗ, ನೀವು ಗೆರಿಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿ |