Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:4 - ಕನ್ನಡ ಸತ್ಯವೇದವು J.V. (BSI)

4 ಐಗುಪ್ತ್ಯರ ದಂಡು ಅಂದರೆ ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಐಗುಪ್ತ್ಯರ ಸೈನ್ಯ ಅಂದರೆ, ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈಜಿಪ್ಟಿನವರು ರಥಾಶ್ವಬಲಗಳಿಂದ ಕೂಡಿದಂಥ ದಂಡಿನ ಸಮೇತ ನಿಮ್ಮನ್ನು ಹಿಂದಟ್ಟಿ ಬಂದಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಈಜಿಪ್ಟಿನ ಸೈನಿಕರಿಗೂ ಅವರ ಕುದುರೆ ರಥಗಳಿಗೂ ಮಾಡಿದ್ದನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಅವರು ನಿಮ್ಮನ್ನು ಓಡಿಸಿಕೊಂಡು ಬರುತ್ತಿದ್ದರು. ಆದರೆ ಯೆಹೋವನು ಅವರನ್ನು ಸಮುದ್ರದ ನೀರಿನಲ್ಲಿ ಮುಳುಗಿಹೋಗುವಂತೆ ಮಾಡಿದುದ್ದನ್ನು ನೋಡಿದ್ದೀರಿ ಮತ್ತು ಅವರು ಸಂಪೂರ್ಣವಾಗಿ ನಾಶವಾಗುವುದನ್ನು ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ಈಜಿಪ್ಟಿನ ಸೈನ್ಯಕ್ಕೆ, ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನು ಅಂದರೆ, ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ, ಸಂಪೂರ್ಣವಾಗಿ ಅವರನ್ನು ನಾಶಮಾಡಿದ್ದನ್ನು ಸಹ ನೀವು ನೋಡಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:4
9 ತಿಳಿವುಗಳ ಹೋಲಿಕೆ  

ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; ಒಬ್ಬನೂ ಉಳಿಯಲಿಲ್ಲ.


ನಂಬಿಕೆಯಿಂದಲೇ ಇಸ್ರಾಯೇಲ್ಯರು ಕೆಂಪುಸಮುದ್ರವನ್ನು ಒಣಭೂವಿುಯನ್ನು ದಾಟುವಂತೆ ದಾಟಿದರು; ಐಗುಪ್ತದೇಶದವರು ಅದನ್ನು ದಾಟುವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.


[ಈ ಜಯಗೀತಕ್ಕೆ ಕಾರಣವೇನಂದರೆ -] ಫರೋಹನ ಕುದುರೆಗಳೂ ರಥಗಳೂ ರಾಹುತರೂ ಸಮುದ್ರದಲ್ಲಿ ಹೊಕ್ಕು ನಡೆಯಲು ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರಮಾಡಿ ಮುಳುಗಿಸಿಬಿಟ್ಟನು; ಇಸ್ರಾಯೇಲ್ಯರಾದರೋ ಸಮುದ್ರದ ಮಧ್ಯದೊಳಗೆ ಒಣನೆಲದಲ್ಲಿ ನಡೆದುಹೋದರು.


ಆತನು ಫರೋಹನ ರಥಗಳನ್ನೂ ಸೈನಿಕರನ್ನೂ ಸಮುದ್ರದಲ್ಲಿ ಕೆಡವಿದನು; ಅವನ ಶ್ರೇಷ್ಠವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿಬಿಟ್ಟನು.


ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಅರಣ್ಯಕ್ಕೆ ಹೊರಟುಹೋಗಿರಿ ಎಂದು ಆಜ್ಞಾಪಿಸಿದನು.


ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.


ನೀವು ಈ ಸ್ಥಳಕ್ಕೆ ಸೇರುವತನಕ ಆತನು ನಿಮಗೋಸ್ಕರ ಅರಣ್ಯದಲ್ಲಿ ಉಪಕಾರ ಮಾಡಿದ್ದನ್ನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು