Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:9 - ಕನ್ನಡ ಸತ್ಯವೇದವು J.V. (BSI)

9 ಮತ್ತು ಯೆಹೋವನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕಿಕೊಳ್ಳುವಿರಿ; ಅದು ಹಾಲೂ ಜೇನೂ ಹರಿಯುವ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. ಆ ದೇಶವು ಎಲ್ಲಾ ಒಳ್ಳೆಯ ವಸ್ತುಗಳಿಂದ ತುಂಬಿದೆ. ಆ ದೇಶವನ್ನು ನಿಮ್ಮ ಪೂರ್ವಿಕರಿಗೆ ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ನಿಮ್ಮ ಪಿತೃಗಳಿಗೂ, ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:9
19 ತಿಳಿವುಗಳ ಹೋಲಿಕೆ  

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ನೀವೂ ನಿಮ್ಮ ಪುತ್ರಪೌತ್ರಾದಿಸಂತತಿಯವರೂ ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ನಾನು ಈಗ ಬೋಧಿಸುವ ಆತನ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕೆಂದೂ ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.


ಸಕಲದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು ಎಂದು ಪ್ರಮಾಣಮಾಡಿ


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ, ಮತ್ತು ನಿನಗೆ ಮೇಲಾಗುವದು.


ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ; ದುಷ್ಟರ ವರುಷಗಳಿಗೆ ಕ್ಷಯ.


ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಸ್ಸಿನ ವರುಷಗಳು ವೃದ್ಧಿಯಾಗುವವು.


ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ ಘನತೆಯೂ ಉಂಟು.


ಅವು ನಿನ್ನ ದಿನಗಳನ್ನು ಹೆಚ್ಚಿಸಿ ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ ನಿನಗೆ ಸುಕ್ಷೇಮವನ್ನುಂಟುಮಾಡುವವು.


ಯೆಹೋವನ ದೃಷ್ಟಿಗೆ ಯಾವದು ನ್ಯಾಯವೂ ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವದು, ಮತ್ತು ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.


ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಶುಭವುಳ್ಳವರಾಗಿ ಬದುಕಿಕೊಳ್ಳುವಂತೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.


ನಿಮ್ಮ ದೇವರಾದ ಯೆಹೋವನು ಉತ್ತಮದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬಾವಿಗಳಲ್ಲಿಯೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತದೆ.


ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.


ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.


ಹೀಗಾದರೆ ಭೂವಿುಯ ಮೇಲೆ ಆಕಾಶವು ಎಷ್ಟು ಕಾಲ ನಿಂತಿರುವದೋ ಅಷ್ಟು ಕಾಲ ನೀವೂ ನಿಮ್ಮ ಸಂತತಿಯವರೂ ನಿಮ್ಮ ಪಿತೃಗಳಿಗೆ ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ಆ ದೇಶದಲ್ಲಿ ಬಾಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು