Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:14 - ಕನ್ನಡ ಸತ್ಯವೇದವು J.V. (BSI)

14 ನಿಮ್ಮ ಕುಲಗಳಲ್ಲಿ ಯಾವದೋ ಒಂದು ಕುಲದಲ್ಲಿ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಯಾವುದಾದರೊಂದು ಕುಲದಲ್ಲಿ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ದಹನಬಲಿಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸುವ ಎಲ್ಲಾ ಆಚಾರಗಳನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ನಿಮ್ಮ ಗೋತ್ರಗಳ ಒಂದರಲ್ಲಿ ಆಯ್ದುಕೊಳ್ಳುವ ಸ್ಥಳದಲ್ಲೇ ನೀವು ನಿಮ್ಮ ದಹನಬಲಿಗಳನ್ನು ಅರ್ಪಿಸಬೇಕು. ಅಲ್ಲೇ ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:14
24 ತಿಳಿವುಗಳ ಹೋಲಿಕೆ  

ಆ ಸಮಾಧಾನವಾಕ್ಯವೇನಂದರೆ ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನೆಂಬದೇ. ಅದನ್ನು ಸಾರುವ ಸೇವೆಗೆ ನಮ್ಮನ್ನು ನೇವಿುಸಿದ್ದಾನೆ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.


ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.


ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ.


ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.


ಜನರು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಾರ್ಪಣೆಗಾಗಿ ಹೋಗುವದಾದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗೀತು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು ಅಂದುಕೊಂಡು


ಇಸ್ರಾಯೇಲ್ಯರಲ್ಲಿ ಯಾವನಾದರೂ ಹೋರಿಯನ್ನಾಗಲಿ ಕುರಿಯನ್ನಾಗಲಿ ಆಡನ್ನಾಗಲಿ ಕೊಯ್ಯುವಾಗ ಅದನ್ನು ಯೆಹೋವನಿಗೆ ಸಮರ್ಪಿಸುವದಕ್ಕಾಗಿ ಆತನ ಗುಡಾರದ ಬಾಗಲಿಗೆ ತಾರದೆ


ಪಾಳೆಯದ ಒಳಗಾಗಲಿ ಹೊರಗಾಗಲಿ ಕೊಯಿದರೆ ಅವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.


ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.


ಧಾನ್ಯ, ದ್ರಾಕ್ಷೆ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವದನ್ನು ಅಭ್ಯಾಸಮಾಡಿಕೊಳ್ಳುವಿರಿ.


ಪ್ರತಿ ವರುಷದಲ್ಲಿ ನೀವೂ ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು.


ನೀವು ಆಡುಕುರಿಗಳಲ್ಲಾಗಲಿ ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.


ವಿಧವಿಧವಾದ ಜೀವಹತ್ಯ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಚರ್ಚೆಗಳು ನಿಮ್ಮ ಊರಲ್ಲಿ ಉಂಟಾದಾಗ, ಸರಿಯಾಗಿ ವಿವೇಚಿಸುವದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳಕ್ಕೆ


ಇಸ್ರಾಯೇಲ್ಯರ ಯಾವದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು ಯೆಹೋವನು ಆದುಕೊಂಡ ಸ್ಥಳಕ್ಕೆ ಬಂದು


ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲ್ಯರೆಲ್ಲರು ಆತನ ಸನ್ನಿಧಿಗೆ ಕೂಡಿ ಬಂದಾಗ ನೀವು ಅವರೆಲ್ಲರಿಗೂ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.


ಸಮೂಹಕ್ಕೋಸ್ಕರವೂ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಯಜ್ಞವೇದಿಗೋಸ್ಕರವೂ ಕಟ್ಟಿಗೆ ಒಡೆಯುವವರನ್ನಾಗಿಯೂ ನೀರು ತರುವವರನ್ನಾಗಿಯೂ ನೇವಿುಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.


ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸುವದಕ್ಕೋಸ್ಕರ ಬೇರೊಂದು ವೇದಿಯನ್ನು ಕಟ್ಟಿ ಯೆಹೋವನಿಗೆ ವಿಮುಖರಾಗಿ ದ್ರೋಹಿಗಳಾಗುವದು ನಮಗೆ ದೂರವಾಗಿರಲಿ ಅಂದರು.


ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.


ಒಂದು ವೇಳೆ ನೀವು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಯೆರೂಸಲೇವಿುನ ಯಜ್ಞವೇದಿಯ ಮುಂದೆಯೇ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಇದೇ ದೇವರಾದ ಯೆಹೋವನ ಆಲಯ, ಇದೇ ಇಸ್ರಾಯೇಲ್ಯರು ಯಜ್ಞವರ್ಪಿಸತಕ್ಕ ವೇದಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು