Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:17 - ಕನ್ನಡ ಸತ್ಯವೇದವು J.V. (BSI)

17 ಧಾನ್ಯ, ದ್ರಾಕ್ಷೆ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ಹರಕೆಮಾಡಿದ ಪದಾರ್ಥಗಳನ್ನೂ ಕಾಣಿಕೆಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನು, ದನಕುರಿಗಳ ಚೊಚ್ಚಲು ಮರಿಗಳನ್ನು, ಹರಕೆಮಾಡಿದ ಪದಾರ್ಥಗಳನ್ನು, ಕಾಣಿಕೆಗಳನ್ನು ಹಾಗು ಯಾಜಕರಿಗಾಗಿ ಪ್ರತ್ಯೇಕಿಸಿದ ಪದಾರ್ಥಗಳನ್ನು ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆಗಳ ದಶಮಾಂಶವನ್ನೂ, ನಿಮ್ಮ ದನಕುರಿಗಳ ಚೊಚ್ಚಲಾದವುಗಳನ್ನೂ, ನೀವು ಮಾಡುವ ಎಲ್ಲಾ ಹರಕೆಯ ಪದಾರ್ಥಗಳನ್ನೂ, ನಿಮ್ಮ ಉಚಿತವಾದ ಕಾಣಿಕೆಗಳನ್ನೂ, ಯಾಜಕರಿಗೆ ಪ್ರತ್ಯೇಕಿಸಿದ ಅರ್ಪಣೆಗಳನ್ನೂ ನಿಮ್ಮ ಊರುಗಳಲ್ಲಿ ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:17
11 ತಿಳಿವುಗಳ ಹೋಲಿಕೆ  

ನಾವು [ಸತ್ತವರಿಗೋಸ್ಕರ] ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇವಿುಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.


ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು


ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ತಾಯಿತಂದೆಯಿಲ್ಲದವರೂ ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.


ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆದುಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ವಂಶಕ್ರಮದಿಂದ ಇಸ್ರಾಯೇಲ್ಯರಾಗಿರುವವರನ್ನು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಭಾಗಿಗಳಾಗಿದ್ದಾರಲ್ಲವೇ.


ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣು ಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.


ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು ಜನರು ಸ್ವೇಚ್ಫೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನೂ ಯೆಹೋವನಿಗೋಸ್ಕರ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧವಸ್ತು ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು