Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:18 - ಕನ್ನಡ ಸತ್ಯವೇದವು J.V. (BSI)

18 ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ, ಅವರ ಸನ್ನಿಧಿಯಲ್ಲೇ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷದಿಂದಿರಬೇಕು; ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಆಳುಗಳು ಹಾಗು ನಿಮ್ಮ ಊರಲ್ಲಿರುವ ಲೇವಿಯರು ಇಂಥವುಗಳನ್ನು ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವುಗಳನ್ನು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವೂ, ನಿಮ್ಮ ಮಕ್ಕಳೂ, ನಿಮ್ಮ ದಾಸರೂ, ನಿಮ್ಮ ದಾಸಿಯರೂ, ನಿಮ್ಮ ಊರುಗಳಲ್ಲಿರುವ ಲೇವಿಯರೂ ತಿನ್ನಬೇಕು. ಹೀಗೆ ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನೀವು ಸಂತೋಷ ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:18
19 ತಿಳಿವುಗಳ ಹೋಲಿಕೆ  

ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಧಾನ್ಯ, ದ್ರಾಕ್ಷೆ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವದನ್ನು ಅಭ್ಯಾಸಮಾಡಿಕೊಳ್ಳುವಿರಿ.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ನಂಬಿ ಉಲ್ಲಾಸಗೊಂಡನು.


ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;


ಮತ್ತು ರಕ್ಷಣೆಯೆಂಬ ಬಾವಿಗಳಿಂದ ನೀರನ್ನು ಉಲ್ಲಾಸದೊಡನೆ ಸೇದುವಿರಿ.


ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.


ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸುವರು; ಉಲ್ಲಾಸಿಸುವರು, ಆನಂದಧ್ವನಿಮಾಡುವರು.


ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರ್ರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹಧ್ವನಿ ಮಾಡಿರಿ.


ಪ್ರತಿ ವರುಷದಲ್ಲಿ ನೀವೂ ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು.


ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಜ್ಞಾಪಕವಿರಲಿ.


ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣು ಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.


ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ.


ಇಗೋ ನಾನು ಕಂಡದ್ದು ಇದೇ; ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದು ಮೇಲಾಗಿಯೂ ಉಚಿತವಾಗಿಯೂ ಇದೆ; ಇದೇ ಅವನ ಪಾಲು.


ನಿಮ್ಮ ಕುಲಗಳಲ್ಲಿ ಯಾವದೋ ಒಂದು ಕುಲದಲ್ಲಿ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು