ಧರ್ಮೋಪದೇಶಕಾಂಡ 12:21 - ಕನ್ನಡ ಸತ್ಯವೇದವು J.V. (BSI)21 ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕಾಗಿ ಆದುಕೊಂಡ ಸ್ಥಳವು ನಿಮಗೆ ದೂರವಾದರೆ ಆತನು ನಿಮಗೆ ಅನುಗ್ರಹಿಸಿದ ದನಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕಾಗಿ ಆರಿಸಿಕೊಂಡ ಸ್ಥಳವು ನಿಮಗೆ ದೂರವಾದರೆ, ಆತನು ನಿಮಗೆ ಅನುಗ್ರಹಿಸಿದ ದನ ಮತ್ತು ಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಲು ಆರಿಸಿಕೊಳ್ಳುವ ಸ್ಥಳ ನಿಮಗೆ ದೂರವಾದರೆ, ಅವರು ನಿಮಗೆ ಅನುಗ್ರಹಿಸಿದ ದನಕುರಿಗಳಲ್ಲಿ ಬೇಕಾದಷ್ಟನ್ನು, ನಾನು ಅಪ್ಪಣೆಕೊಟ್ಟ ಮೇರೆಗೆ, ನೀವು ಕೊಯ್ದು ನಿಮ್ಮ ಊರಲ್ಲೇ ಊಟಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾದರೆ, ಯೆಹೋವ ದೇವರು ನಿಮಗೆ ಕೊಟ್ಟ ದನಕುರಿಗಳಿಂದ ನಾನು ನಿಮಗೆ ಆಜ್ಞಾಪಿಸಿದಂತೆ ನಿಮ್ಮ ಊರಲ್ಲೇ ನಿಮಗೆ ಮನಸ್ಸಿದ್ದಷ್ಟು ಮಾಂಸಾಹಾರವನ್ನು ಮಾಡಿ ಉಣ್ಣಬಹುದು. ಅಧ್ಯಾಯವನ್ನು ನೋಡಿ |