Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:6 - ಕನ್ನಡ ಸತ್ಯವೇದವು J.V. (BSI)

6 ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ, ನಿಮ್ಮ ಅರ್ಪಣೆಗಳನ್ನೂ, ನಿಮ್ಮ ಬೆಳೆಯನ್ನೂ, ದಶಮಾಂಶಗಳನ್ನೂ, ನಿಮ್ಮ ಹರಕೆಗಳನ್ನೂ, ಉಚಿತವಾದ ಕಾಣಿಕೆಗಳನ್ನೂ, ನಿಮ್ಮ ಚೊಚ್ಚಲಾದ ದನಕುರಿಗಳನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:6
22 ತಿಳಿವುಗಳ ಹೋಲಿಕೆ  

ವಾರಕ್ಕೆ ಎರಡಾವರ್ತಿ ಉಪವಾಸ ಮಾಡುತ್ತೇನೆ; ನಾನು ಸಂಪಾದಿಸುವ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ ಅಂದುಕೊಂಡನು.


ಅಯ್ಯೋ ಫರಿಸಾಯರೇ, ನೀವು ಮರುಗ ಸದಾಪು ಮುಂತಾದ ಸಕಲ ಪಲ್ಯಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ; ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಒತ್ತಟ್ಟಿಗೆ ಬಿಟ್ಟಿದ್ದೀರಿ; ಇವುಗಳನ್ನು ಮಾಡಬೇಕಾಗಿತ್ತು, ಅವುಗಳನ್ನೂ ಬಿಡಬಾರದು.


ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.


ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದದೆಲ್ಲವನ್ನೂ ಬರಮಾಡಿಕೊಳ್ಳುವೆನು.


ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿಯೂ ನೀವು ಕೆಲವು ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಿ


ಧಾನ್ಯ, ದ್ರಾಕ್ಷೆ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ಹರಕೆಮಾಡಿದ ಪದಾರ್ಥಗಳನ್ನೂ ಕಾಣಿಕೆಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.


ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.


ಆದರೆ ಯೆಹೋವನ ಸಾನ್ನಿಧ್ಯದಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವದಕ್ಕೆ ನಮಗೂ ಹಕ್ಕುಂಟೆಂಬದಕ್ಕೆ ಇದು ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ - ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವದಕ್ಕೆ ಆಸ್ಪದವಿಲ್ಲ.


ಅನಂತರ ಆಕೆಯು ಮೂರು ವರುಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರಸಹಿತವಾಗಿ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು; ಮಗನು ಇನ್ನೂ ಚಿಕ್ಕವನಾಗಿದ್ದನು.


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ ಯಾಜಕರಾದ ಅವನ ಬಂಧುಗಳೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಾಯೇಲ್‍ದೇವರ ಯಜ್ಞವೇದಿಯನ್ನು ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿದರು.


ಇಸ್ರಾಯೇಲ್ಯರೂ ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದೇವರಿಗೋಸ್ಕರ ಪ್ರತ್ಯೇಕಿಸತಕ್ಕ ಭಾಗಗಳನ್ನು ತಂದು ಸೇವೆನಡಿಸುತ್ತಿರುವ ಯಾಜಕರು, ದ್ವಾರಪಾಲಕರು, ಗಾಯಕರು ಇವರೂ ಪವಿತ್ರಾಲಯದ ಪಾತ್ರೆಗಳೂ ಇರುವ ಕೊಠಡಿಗಳಲ್ಲಿ ಇಡಬೇಕು. ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವದಿಲ್ಲ ಎಂದು ಬರೆದುಕೊಟ್ಟರು.


ಎಲ್ಕಾನನು ಕುಟುಂಬಸಹಿತವಾಗಿ ಎಂದಿನಂತೆ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸುವದಕ್ಕೂ ಹರಕೆಸಲ್ಲಿಸುವದಕ್ಕೂ ಹೋಗುವದಕ್ಕೆ ಸಿದ್ಧನಾಗಲು ಹನ್ನಳು -


ಯೆಹೋವನು ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ ಈ ಮನೆಯನ್ನು ನನ್ನ ಯಜ್ಞಾಲಯಕ್ಕಾಗಿ ಆರಿಸಿಕೊಂಡಿದ್ದೇನೆ.


ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು ಜನರು ಸ್ವೇಚ್ಫೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನೂ ಯೆಹೋವನಿಗೋಸ್ಕರ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧವಸ್ತು ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುವೆವು; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡಿಸುತ್ತಿರುವ ಯಾಜಕರಿಗೆ ಕೊಡುವೆವು;


ನಾನು ನಿನಗೆ ಕೃತಜ್ಞತಾಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನಾಮವನ್ನು ಪ್ರಖ್ಯಾತಿಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು