Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:8 - ಕನ್ನಡ ಸತ್ಯವೇದವು J.V. (BSI)

8 ನಾವು ಈಗ ಈ ಸ್ಥಳದಲ್ಲಿ ನಡೆಯುವಂತೆ ಎಲ್ಲರೂ ತಮ್ಮತಮ್ಮ ಮನಸ್ಸಿಗೆ ತೋರಿದಂತೆ ನಡೆಯಕೂಡದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನಾವು ಈಗ ಈ ಸ್ಥಳದಲ್ಲಿ ವರ್ತಿಸುವಂತೆ ಎಲ್ಲರೂ ನಡೆದುಕೊಳ್ಳಬೇಕೇ ವಿನಃ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ವರ್ತಿಸಕೂಡದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8-9 “ನೀವು ಇನ್ನೂ ವಾಗ್ದಾನದ ದೇಶವನ್ನು ಪ್ರವೇಶಿಸಲಿಲ್ಲದ ಕಾರಣ ನೀವು ಯೆಹೋವನಿಗೆ ನಿಮ್ಮ ಇಷ್ಟಾನುಸಾರವಾಗಿ ಆರಾಧನೆ ಮಾಡುತ್ತಿದ್ದೀರಿ. ಆದರೆ ಇದನ್ನೇ ಮುಂದುವರಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:8
10 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಿದ್ದನು.


ನರನ ನಡತೆಯು ಸ್ವಂತ ದೃಷ್ಟಿಗೆ ನೆಟ್ಟಗೆ; ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.


ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;


ಆ ಗೊಂಡೆಗಳ ಉಪಯೋಗವೇನಂದರೆ - ನೀವು ಅವುಗಳನ್ನು ನೋಡುವಾಗ ಯೆಹೋವನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ನಡಿಸಬೇಕು, ಮತ್ತು ನೀವು ಪೂರ್ವದಲ್ಲಿ ನನಗೆ ದ್ರೋಹಿಗಳಾಗಿ ಮನಸ್ಸಿಗೂ ಕಣ್ಣಿಗೂ ತೋರಿದಂತೆ ದಾರಿತಪ್ಪಿ ನಡೆದ ಪ್ರಕಾರ ಇನ್ನು ನಡೆಯದೆ


ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸುತ್ತಿದ್ದಿರೋ?


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವಾಸ್ತ್ಯಕ್ಕೆ ಸೇರಿ ನೀವು ಇನ್ನು ವಿಶ್ರಾಂತಿ ಹೊಂದಲಿಲ್ಲವಲ್ಲಾ.


ಆಗ ಯೆಹೋಶುವನು ಇಸ್ರಾಯೇಲ್ಯರಿಗೆ - ಇಲ್ಲಿ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ ಎಂದು ಹೇಳಿ -


ಅಲ್ಲಿಂದ ಬಂದ ಜನರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದವರಿಗೆ ಸುನ್ನತಿಯಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು