ಧರ್ಮೋಪದೇಶಕಾಂಡ 13:10 - ಕನ್ನಡ ಸತ್ಯವೇದವು J.V. (BSI)10 ತರುವಾಯ ಜನರೆಲ್ಲರೂ ಹಾಕಲಿ. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆ ಮಾಡಿ, ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಯೆಹೋವ ದೇವರ ಆಶ್ರಯದಿಂದ ಅಂಥವರು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ, ಅಂಥವರನ್ನು ಕಲ್ಲು ಎಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.