ಧರ್ಮೋಪದೇಶಕಾಂಡ 13:16 - ಕನ್ನಡ ಸತ್ಯವೇದವು J.V. (BSI)16 ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ನಿಶ್ಶೇಷವಾಗಿ ಸುಟ್ಟುಬಿಡಬೇಕು. ಅದು ತಿರಿಗಿ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದರಲ್ಲಿ ಇರುವ ಎಲ್ಲ ಸಾಮಗ್ರಿಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ, ಅದರಲ್ಲಿರುವ ಎಲ್ಲ ಸಾಮಾನುಗಳನ್ನೂ ನಿಮ್ಮ ದೇವರಾದ ಸರ್ವೇಶ್ವರನಿಗೆ ನಿಶ್ಯೇಷವಾಗಿ ಸುಟ್ಟುಬಿಡಬೇಕು. ಅದು ಪುನಃ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅದನ್ನು ಪುನಃ ಕಟ್ಟಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀವು ಆ ಪಟ್ಟಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಪಟ್ಟಣದ ಮಧ್ಯದಲ್ಲಿ ತಂದುಹಾಕಿ ಅದಕ್ಕೆ ಬೆಂಕಿಹೊತ್ತಿಸಿ ಇಡೀ ಪಟ್ಟಣವನ್ನು ಬೆಂಕಿಯಿಂದ ಸುಡಬೇಕು. ಇದು ದೇವರಾದ ಯೆಹೋವನಿಗೆ ಸರ್ವಾಂಗಹೋಮವಾಗುವುದು. ಆ ಪಟ್ಟಣವು ಕಲ್ಲುಗಳ ರಾಶಿಯಾಗಿ ಪರಿಣಮಿಸುವುದು ಮತ್ತು ಯಾರೂ ಆ ಪಟ್ಟಣವನ್ನು ಮತ್ತೆ ಕಟ್ಟಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಆ ಊರಿನ ಎಲ್ಲಾ ಸಾಮಗ್ರಿಗಳನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ, ಆ ಪಟ್ಟಣವನ್ನೂ, ಅದರ ಎಲ್ಲಾ ವಸ್ತುವನ್ನೂ ಸಂಪೂರ್ಣವಾಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಯಾಗಿ ಸುಟ್ಟುಬಿಡಬೇಕು. ಅದು ಎಂದಿಗೂ ಹಾಳುದಿಬ್ಬವಾಗಿರಬೇಕು; ಇನ್ನು ಮೇಲೆ ಅದನ್ನು ಕಟ್ಟಬಾರದು; ಆ ಶಾಪಗ್ರಸ್ತ ವಸ್ತುಗಳಲ್ಲಿ ಏನನ್ನೂ ತೆಗೆದುಕೊಳ್ಳಬಾರದು. ಅಧ್ಯಾಯವನ್ನು ನೋಡಿ |