ಧರ್ಮೋಪದೇಶಕಾಂಡ 13:17 - ಕನ್ನಡ ಸತ್ಯವೇದವು J.V. (BSI)17-18 ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ, ಅಧ್ಯಾಯವನ್ನು ನೋಡಿ |
ಐಗುಪ್ತ್ಯರು ನಿನ್ನ ವಿಷಯದಲ್ಲಿ - ಯೆಹೋವನು ಕೇಡುಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲ್ಯರನ್ನು ಇಲ್ಲಿಂದ ಕರಕೊಂಡು ಹೋದನಲ್ಲಾ; ಅವರನ್ನು ಬೆಟ್ಟಗಳಲ್ಲಿ ಸಾಯಿಸಿ ಭೂವಿುಯಲ್ಲಿ ಉಳಿಯದಂತೆ ನಿರ್ಮೂಲ ಮಾಡುವದಕ್ಕೇನೇ ಅವರನ್ನು ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾಗಬೇಕೇ? ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬೇರೆ ಮಾಡಿಕೋ.