ಧರ್ಮೋಪದೇಶಕಾಂಡ 13:2 - ಕನ್ನಡ ಸತ್ಯವೇದವು J.V. (BSI)2 ಈ ದೇವತೆಗಳನ್ನು ಅವಲಂಬಿಸಿ ಸೇವಿಸೋಣ ಎಂದು ಬೋಧಿಸುತ್ತಾ ಆ ಬೋಧನೆಯನ್ನು ಸ್ಥಾಪಿಸುವದಕ್ಕೆ ಒಂದು ಅದ್ಭುತವನ್ನಾಗಲಿ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಲು ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ‘ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ’ ಎಂದು ಬೋಧಿಸಬಹುದು; ಆ ಬೋಧನೆಯನ್ನು ರುಜುವಾತು ಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ಅದ್ಭುತಕಾರ್ಯಗಳನ್ನು ಮಾಡಿತೋರಿಸಬಹುದು. ಆಮೇಲೆ ಅವನು ನಿಮಗೆ ಗೊತ್ತಿಲ್ಲದ ದೇವರನ್ನು ಅನುಸರಿಸಲು ನಿಮಗೆ ಹೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ,” ಎಂದು ಬೋಧಿಸಬಹುದು. ಆ ಬೋಧನೆಯನ್ನು ರುಜುವಾತುಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಸಹ ಹೇಳಬಹುದು. ಅಧ್ಯಾಯವನ್ನು ನೋಡಿ |