ಧರ್ಮೋಪದೇಶಕಾಂಡ 13:6 - ಕನ್ನಡ ಸತ್ಯವೇದವು J.V. (BSI)6 ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು ಅಧ್ಯಾಯವನ್ನು ನೋಡಿ |
ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ನಿಮ್ಮಲ್ಲಿ ಮೃದುಸ್ವಭಾವಿಯೂ ಅತಿಸುಕುಮಾರನೂ ಆಗಿರುವವನೂ ತನಗೆ ತಿನ್ನಲಿಕ್ಕೆ ಏನೂ ಉಳಿಯದೆಹೋದದರಿಂದ ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯಳಾದ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಯನ್ನು ಕಪ್ಪುಮಾಡಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆಹೋಗುವನು.