Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:1 - ಕನ್ನಡ ಸತ್ಯವೇದವು J.V. (BSI)

1 ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನೀವು ನಿಮ್ಮ ದೇವರಾದ ಸರ್ವೇಶ್ವರನ ಮಕ್ಕಳು. ಆದುದರಿಂದ ಸತ್ತವರಿಗಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು; ನಿಮ್ಮ ಮುಂದಲೆಯನ್ನು ಬೋಳಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನೀವು ನಿಮ್ಮ ದೇವರಾದ ಯೆಹೋವನ ಮಕ್ಕಳು. ನಿಮ್ಮಲ್ಲಿ ಯಾರಾದರೂ ಸತ್ತರೆ ನೀವು ತಲೆಬೋಳಿಸಿಕೊಂಡಾಗಲಿ ನಿಮ್ಮನ್ನು ಕತ್ತರಿಸಿಕೊಂಡಾಗಲಿ ನಿಮ್ಮ ದುಃಖವನ್ನು ಪ್ರದರ್ಶಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀವು ನಿಮ್ಮ ದೇವರಾದ ಯೆಹೋವ ದೇವರ ಮಕ್ಕಳು. ನೀವು ಸತ್ತವರಿಗೋಸ್ಕರ ಗಾಯಮಾಡಿಕೊಳ್ಳಬಾರದು. ಮುಂದಲೆಯನ್ನು ಬೋಳಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:1
29 ತಿಳಿವುಗಳ ಹೋಲಿಕೆ  

ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.


ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ, ವಾಗ್ದಾನಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬದು.


ಅವರು ತಲೆಬೋಳಿಸಿಕೊಳ್ಳಬಾರದು; ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯ ಮಾಡಿಕೊಳ್ಳಬಾರದು.


ಮತ್ತು ಯಾವ ಸ್ಥಳದಲ್ಲಿ - ನೀವು ನನ್ನ ಜನರಲ್ಲವೆಂದು ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ಜೀವವುಳ್ಳ ದೇವರ ಪುತ್ರರು ಎನಿಸಿಕೊಳ್ಳುವರು ಎಂಬದು.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ ಆತನು ಬಹು ಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾಕರ್ತನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.


ನಾವು ದೇವರ ಮಕ್ಕಳಾಗಿದ್ದೇವೆಂಬದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.


ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಗಡ್ಡ ಬೋಳಿಸಿ ಬಟ್ಟೆಹರಿದು ಗಾಯಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಒಂದು ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ಈ ದೇಶದಲ್ಲಿನ ದೊಡ್ಡವರೂ ಅಲ್ಪರೂ ಸಾಯುವರು; ಅವರನ್ನು ಯಾರೂ ಹೂಣಿಡರು, ಅವರಿಗಾಗಿ ಯಾರೂ ಗೋಳಾಡರು, ಗಾಯ ಮಾಡಿಕೊಳ್ಳರು, ತಲೆಬೋಳಿಸಿಕೊಳ್ಳರು;


ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ.


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಯೇಸು ಆ ಜನಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೆ ಸಹ ಸಾಯುವದಕ್ಕಿದ್ದನು.


ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಎಣಿಸಿ ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತಜನಾಂಗಗಳ ಬಾಧ್ಯಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ತಂದೆಯೆನ್ನುವಿ ಅಂದುಕೊಂಡೆನು.


ಆ ಕಾಲದಲ್ಲಿ ಅಂದರೆ ದೇವಪುತ್ರರು ಮನುಷ್ಯಪುತ್ರಿಯರನ್ನು ಕೂಡಿ ಅವರಲ್ಲಿ ಮಕ್ಕಳನ್ನು ಪಡೆಯುವ ಕಾಲದಲ್ಲಿ ಮಹಾಶರೀರಿಗಳು ಭೂವಿುಯ ಮೇಲಿದ್ದರು; ಅನಂತರದಲ್ಲಿಯೂ ಇದ್ದರು. ಪೂರ್ವದಲ್ಲಿ ಹೆಸರುಗೊಂಡ ಪರಾಕ್ರಮಶಾಲಿಗಳು ಇವರೇ.


ದೇವಪುತ್ರರು ಮನುಷ್ಯಪುತ್ರಿಯರ ಸೌಂದರ್ಯವನ್ನು ನೋಡಿ ತಮಗೆ ಇಷ್ಟರಾದವರನ್ನು ಹೆಂಡರನ್ನಾಗಿ ಮಾಡಿಕೊಂಡರು.


ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ತಿಳಿದುಕೊಳ್ಳುತ್ತೇವೆ.


ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು ನಿರೀಕ್ಷೆಯಿಲ್ಲದವರಾದ ಇತರರಂತೆ ದುಃಖಿಸುವದು ನಮ್ಮ ಮನಸ್ಸಿಗೆ ಒಪ್ಪುವದಿಲ್ಲ.


ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶನಹೊಂದಿದೆ ಫಿಲಿಷ್ಟಿಯದ ಬೈಲುಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ?


ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.


ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯ ಮಾಡಿಕೊಂಡರು.


ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ನಡೆಯಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು [ಜನಾಂಗವನ್ನಾಗಿ] ಮಾಡಿ ಸ್ಥಾಪಿಸಿದನಲ್ಲವೇ.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು