Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:22 - ಕನ್ನಡ ಸತ್ಯವೇದವು J.V. (BSI)

22 ಪ್ರತಿವರುಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಪ್ರತಿ ವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಪ್ರತಿ ವರ್ಷ ನಿಮ್ಮ ಹೊಲದ ಬೆಳೆಯಲ್ಲಿ ಹತ್ತನೆಯ ಒಂದು ಅಂಶವನ್ನು ಪ್ರತ್ಯೇಕಿಸಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:22
13 ತಿಳಿವುಗಳ ಹೋಲಿಕೆ  

ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕರಿಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವೆವು; ನಮ್ಮ ಭೂವಿುಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;


ಧಾನ್ಯ, ದ್ರಾಕ್ಷೆ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ಹರಕೆಮಾಡಿದ ಪದಾರ್ಥಗಳನ್ನೂ ಕಾಣಿಕೆಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.


ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು


ಲೇವಿಯರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವದಕ್ಕಾಗಿ ಇಸ್ರಾಯೇಲ್ಯರಿಂದ [ಸಕಲಪದಾರ್ಥಗಳ] ಹತ್ತನೆಯ ಪಾಲನ್ನು ಗೊತ್ತುಮಾಡಿಕೊಟ್ಟಿದ್ದೇನೆ.


ಮತ್ತು ನಾನು ಕಂಬವಾಗಿ ನಿಲ್ಲಿಸಿರುವ ಈ ಕಲ್ಲು ದೇವರ ಮನೆಯಾಗುವದು. ಇದಲ್ಲದೆ ನಿನ್ನಿಂದ ನನಗೆ ಬರುವ ಎಲ್ಲಾ ಆಸ್ತಿಯಲ್ಲಿ ಹತ್ತರಲ್ಲೊಂದು ಪಾಲನ್ನು ನಿನಗೆ ಸಮರ್ಪಿಸುವೆನೆಂಬದಾಗಿ ಮಾತುಕೊಡುತ್ತೇನೆ ಎಂದು ಹರಕೆಮಾಡಿಕೊಂಡನು.


ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಪ್ರತ್ಯೇಕಿಸಬೇಕು;


ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.


ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ವಿುಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ, ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಜೀವನಕ್ಕಾಗುತ್ತದೆ ಎಂದು ಹೇಳಿದನು.


ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬದನ್ನು ಯೋಸೇಫನು ಐಗುಪ್ತದೇಶದಲ್ಲಿ ಕಟ್ಟಳೆಯಾಗಿ ನೇವಿುಸಿದನು. ಈ ದಿನದವರೆಗೂ ಹಾಗೆಯೇ ಇದೆ. ವೈದಿಕರ ಭೂವಿುಯು ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.


ನೀವೂ ನಿಮ್ಮ ಮನೆಗಳವರೂ ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ.


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದ ಕೊಠಡಿಗಳಲ್ಲಿಡಬೇಕು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು