Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:26 - ಕನ್ನಡ ಸತ್ಯವೇದವು J.V. (BSI)

26 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಕೊಂಡುಕೊಂಡು ನೀವೂ ನಿಮ್ಮ ಮನೆಯವರೂ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಕೊಂಡುಕೊಂಡು ನೀವೂ ನಿಮ್ಮ ಮನೆಯವರೂ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಲ್ಲಿ ನಿಮಗೆ ಬೇಕಾದ ದನಕುರಿಗಳನ್ನು ಮತ್ತು ನಿಮಗೆ ಬೇಕಾಗುವ ಆಹಾರವಸ್ತುಗಳನ್ನು ಮತ್ತು ಪಾನೀಯಗಳನ್ನು ಆ ಹಣದಿಂದ ಖರೀದಿಮಾಡಿ ನೀವೂ ನಿಮ್ಮ ಕುಟುಂಬದವರೂ ನಿಮ್ಮ ದೇವರಾದ ಯೆಹೋವನ ಆ ಸ್ಥಳದಲ್ಲಿ ತಿಂದು ಸಂತೋಷಪಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ, ಮೊದಲಾದವುಗಳನ್ನು ಹಣದಿಂದ ಕೊಂಡುಕೊಂಡು ನೀವೂ, ನಿಮ್ಮ ಮನೆಯವರೂ, ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಊಟಮಾಡಿ, ಸಂತೋಷವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:26
16 ತಿಳಿವುಗಳ ಹೋಲಿಕೆ  

ಬಳಿಕ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿ


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.


ಅರಣ್ಯದಲ್ಲಿ ಆಶಾತುರರಾಗಿ ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.


ಆತನು ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.


ಅವರು ಯೆರೂಸಲೇವಿುಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಳ್ಳುವವರನ್ನೂ ಹೊರಡಿಸಿಬಿಡುವದಕ್ಕೆ ಪ್ರಾರಂಭಿಸಿ ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿದನು;


ಬೆಳ್ಳಿಯನ್ನು ನೂರು ತಲಾಂತು, ಗೋದಿಯನ್ನು ನೂರು ಕೋರ್, ದ್ರಾಕ್ಷಾರಸವನ್ನು ನೂರು ಬತ್, ಎಣ್ಣೆಯನ್ನು ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.


ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.


ಆದುಕೊಳ್ಳುವ ಸ್ಥಳಕ್ಕೇ ತಂದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸ ದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.


ಅವುಗಳನ್ನು ಮಾರಿಬಿಟ್ಟು ಆ ಹಣದ ಗಂಟನ್ನು ಆತನು ಆದುಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು