Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:27 - ಕನ್ನಡ ಸತ್ಯವೇದವು J.V. (BSI)

27 ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದದರಿಂದ ನೀವು ಅವರನ್ನು ಕೈಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದ್ದರಿಂದ ನೀವು ಅವರನ್ನು ಕೈಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಲೇವಿಯರಿಗೆ ನಿಮ್ಮ ಹಾಗೆ ಯಾವ ಸ್ವಂತ ಸೊತ್ತು ಇಲ್ಲವಾದುದರಿಂದ ನೀವು ಅವರನ್ನು ಕೈಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಿಮ್ಮ ಊರಲ್ಲಿ ನೆಲೆಸಿರುವ ಲೇವಿಯರನ್ನು ಮರೆಯಬೇಡಿರಿ. ನಿಮ್ಮ ಆಹಾರದಲ್ಲಿ ಅವರಿಗೂ ಪಾಲುಕೊಡಿರಿ. ಯಾಕೆಂದರೆ ಅವರಿಗೆ ದೇಶದಲ್ಲಿ ನಿಮ್ಮ ಹಾಗೆ ಸ್ವಾಸ್ತ್ಯ ದೊರಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿಮ್ಮ ಊರುಗಳಲ್ಲಿರುವ ಲೇವಿಯರನ್ನು ಕೈಬಿಡಬಾರದು. ಏಕೆಂದರೆ ಅವರಿಗೆ ನಿಮ್ಮ ಸಂಗಡ ಪಾಲೂ, ಸೊತ್ತೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:27
9 ತಿಳಿವುಗಳ ಹೋಲಿಕೆ  

ಆಗ ಊರಲ್ಲಿರುವ ಅನ್ಯದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆಹೋದ ಲೇವಿಯರೂ ಉಂಡು ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನಂದರೆ - ಇಸ್ರಾಯೇಲ್ಯರ ದೇಶದಲ್ಲಿ ನಿನಗೆ ಸ್ವಂತಕ್ಕಾಗಿ ಭೂಸ್ಥಿತಿ ಆಗುವದಿಲ್ಲ; ಅವರೊಂದಿಗೆ ನಿನಗೆ ಪಾಲು ಇರುವದಿಲ್ಲ. ಇಸ್ರಾಯೇಲ್ಯರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಸ್ವಾಸ್ತ್ಯವಾಗಿಯೂ ಇದ್ದೇನೆ.


ಆದುಕೊಳ್ಳುವ ಸ್ಥಳಕ್ಕೇ ತಂದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸ ದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ಪ್ರಸಂಗದಲ್ಲಿಯೂ ಉಪದೇಶದಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.


ದೇವರ ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶಮಾಡುವವನಿಗೆ ತನಗಿರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.


ಆದದರಿಂದ ವಿುಕ್ಕ ಇಸ್ರಾಯೇಲ್ಯರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವಾಸ್ತ್ಯ.


ಇಂಥ ಕೆಲಸಗಳನ್ನು ನಡಿಸುವವರು ಯೆಹೋವನಿಗೆ ಅಸಹ್ಯರಾಗಿದ್ದಾರೆ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮೆದುರಿನಿಂದ ಹೊರಡಿಸಿಬಿಡುತ್ತಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು