Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:29 - ಕನ್ನಡ ಸತ್ಯವೇದವು J.V. (BSI)

29 ಆಗ ಊರಲ್ಲಿರುವ ಅನ್ಯದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆಹೋದ ಲೇವಿಯರೂ ಉಂಡು ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:29
30 ತಿಳಿವುಗಳ ಹೋಲಿಕೆ  

ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.


ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದದರಿಂದ ನೀವು ಅವರನ್ನು ಕೈಬಿಡಬಾರದು.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ; ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.


ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ಅದರಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ಸಂಭ್ರಮದಿಂದಿರಬೇಕು.


ಆದುಕೊಳ್ಳುವ ಸ್ಥಳಕ್ಕೇ ತಂದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸ ದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಹೇಗೂ ಒಳಗಿರುವಂಥದನ್ನು ದಾನಾಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವದು.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನಂದರೆ - ಇಸ್ರಾಯೇಲ್ಯರ ದೇಶದಲ್ಲಿ ನಿನಗೆ ಸ್ವಂತಕ್ಕಾಗಿ ಭೂಸ್ಥಿತಿ ಆಗುವದಿಲ್ಲ; ಅವರೊಂದಿಗೆ ನಿನಗೆ ಪಾಲು ಇರುವದಿಲ್ಲ. ಇಸ್ರಾಯೇಲ್ಯರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಸ್ವಾಸ್ತ್ಯವಾಗಿಯೂ ಇದ್ದೇನೆ.


ನೀವು ಕೂಡಿಸದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ನೀವು ಅಗೆಯದ ನೀರಗುಂಡಿಗಳನ್ನೂ ನೀವು ಬೆಳಸದ ದ್ರಾಕ್ಷೇತೋಟಗಳನ್ನೂ ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ


ಆದದರಿಂದ ವಿುಕ್ಕ ಇಸ್ರಾಯೇಲ್ಯರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವಾಸ್ತ್ಯ.


ವಿಧವೆಯನ್ನೂ ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.


ಸದಾಚಾರವನ್ನು ಅಭ್ಯಾಸಮಾಡಿರಿ; ನ್ಯಾಯನಿರತರಾಗಿರಿ, ಹಿಂಸಕನನ್ನು ತಿದ್ದಿ ಸರಿಪಡಿಸಿರಿ, ಅನಾಥನಿಗೆ ನ್ಯಾಯತೀರಿಸಿರಿ, ವಿಧವೆಯ ಪಕ್ಷವಾಗಿ ವಾದಿಸಿರಿ.


ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವದು ಪಾಪ.


ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.


ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನೇ, ಅವನನ್ನು ಶತ್ರುಗಳ ಅಧೀನಕ್ಕೆ ಕೊಡಬೇಡ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು