ಧರ್ಮೋಪದೇಶಕಾಂಡ 15:12 - ಕನ್ನಡ ಸತ್ಯವೇದವು J.V. (BSI)12 ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ ಸ್ತ್ರೀಯಾಗಲಿ ನಿಮಗೆ ದಾಸರಾಗಿರುವದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ ಅಂಥವರು ಆರು ವರುಷಗಳವರೆಗೂ ನಿಮ್ಮ ಸೇವೆಮಾಡಲಿ; ಏಳನೆಯ ವರುಷದಲ್ಲಿ ನೀವು ಅವರನ್ನು ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ, ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಸ್ವದೇಶದವರಲ್ಲಿ ಯಾವ ಹಿಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ ಮಾರಲ್ಪಟ್ಟಿದ್ದರೆ ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ, ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನೀವು ಹೀಬ್ರೂ ಮನುಷ್ಯನನ್ನೋ ಸ್ತ್ರೀಯನ್ನೋ ನಿಮ್ಮ ಗುಲಾಮರಾಗಿ ಕ್ರಯಕ್ಕೆ ತೆಗೆದುಕೊಳ್ಳಬಹುದು. ಅವರನ್ನು ನಿಮ್ಮ ಗುಲಾಮರಾಗಿ ಆರು ವರ್ಷಗಳ ಕಾಲ ಇಟ್ಟುಕೊಳ್ಳಬಹುದು. ಆದರೆ ಏಳನೆಯ ವರ್ಷದಲ್ಲಿ ನೀವು ಅವರನ್ನು ಸ್ವತಂತ್ರರಾಗಿ ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮ ಸಹೋದರನಾದ ಹಿಬ್ರಿಯನಾಗಲಿ, ಒಬ್ಬ ಹಿಬ್ರಿಯ ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ, ಆರು ವರ್ಷ ನಿಮಗೆ ಮಾರಾಟವಾಗಿದ್ದರೆ ಮತ್ತು ಸೇವೆ ಮಾಡಿದ್ದರೆ, ಏಳನೆಯ ವರ್ಷದಲ್ಲಿ ಅವರನ್ನು ಬಿಡುಗಡೆ ಮಾಡಿ ಕಳುಹಿಸಿಬಿಡಿರಿ. ಅಧ್ಯಾಯವನ್ನು ನೋಡಿ |