Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:18 - ಕನ್ನಡ ಸತ್ಯವೇದವು J.V. (BSI)

18 ದಾಸನನ್ನು ಬಿಡುಗಡೆಮಾಡುವದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರುಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನುಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಗುಲಾಮನನ್ನು ಬಿಡುಗಡೆ ಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ಗುಲಾಮನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲವೆ? ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಿಮ್ಮ ಗುಲಾಮರನ್ನು ಸ್ವತಂತ್ರರಾಗಿ ಬಿಡಬೇಕಲ್ಲಾ ಎಂದು ಬೇಸರಪಡಬೇಡಿ. ಅವರು ಅರ್ಧಕೂಲಿ ತೆಗೆದುಕೊಂಡು ಆರು ವರ್ಷ ನಿಮ್ಮ ಸೇವೆ ಮಾಡಿದ್ದಾರಲ್ಲಾ? ನಿಮ್ಮ ಕಾರ್ಯಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ಸಫಲಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಒಬ್ಬ ಗುಲಾಮನನ್ನು ನಿಮ್ಮಿಂದ ಬಿಡುಗಡೆಯಾಗಿ ಕಳುಹಿಸುವುದು ನಿಮಗೆ ಕಷ್ಟವೆಂದು ಹೇಳಿಕೊಳ್ಳಬಾರದು. ಏಕೆಂದರೆ ಅವನು ಆರು ವರ್ಷ ನಿಮ್ಮ ದಾಸನಾಗಿದ್ದದರಿಂದ ಸಂಬಳದ ಸೇವಕನಿಗಿಂತ ಎರಡಷ್ಟಾಗಿದ್ದನು. ಹೀಗೆ ನಿಮ್ಮ ದೇವರಾದ ಯೆಹೋವ ದೇವರು ನೀವು ಮಾಡುವುದೆಲ್ಲದರಲ್ಲಿಯೂ ನಿಮ್ಮನ್ನು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:18
6 ತಿಳಿವುಗಳ ಹೋಲಿಕೆ  

ಕರ್ತನು ನನಗೆ ಹೇಳಿರುವದೇನಂದರೆ - ಆಳಿನ ವರುಷ ವಾಯಿದೆಗೆ ಸರಿಯಾದ ಒಂದು ವರುಷಕ್ಕೇ ಕೇದಾರಿನ ಸಕಲ ವೈಭವವು ಇಲ್ಲವಾಗುವದು;


ಈಗ ಯೆಹೋವನು ಹೇಳುವದೇನಂದರೆ - ಆಳಿನ ಒಂದೊಂದು ವರುಷ ವಾಯಿದೆಗೆ ಸರಿಯಾದ ಮೂರು ವರುಷಕ್ಕೇ ಮೋವಾಬಿನ ಮಹಿಮೆಯೂ ಅಲ್ಲಿನವರ ದೊಡ್ಡ ಗುಂಪೂ ಹೀನಾಯಕ್ಕೆ ಈಡಾಗುವವು; ಉಳಿದ ಜನವು ಹೆಚ್ಚದೆ ಕೇವಲ ಸ್ವಲ್ಪವಾಗಿಯೇ ಇರುವದು ಎಂಬದೇ.


ಆ ದಿನ ಮೊದಲುಗೊಂಡು ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಲ್ಲಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.


ದನಗಳಲ್ಲಿಯೂ ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು.; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.


ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು