Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:21 - ಕನ್ನಡ ಸತ್ಯವೇದವು J.V. (BSI)

21 ಅದು ಕುಂಟಾಗಿ ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಕೂಡದು; ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಅದು ಕುಂಟಾಗಿ, ಕುರುಡಾಗಿ, ಇಲ್ಲವೆ ಬೇರೆ ವಿಧದಲ್ಲಿ ದೋಷವುಳ್ಳದ್ದಾಗಿದ್ದರೆ ಅದನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯಾಗಿ ಸಮರ್ಪಿಸಕೂಡದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆದರೆ ಆ ಚೊಚ್ಚಲು ಪ್ರಾಣಿಗಳು ಕುಂಟಾಗಿದ್ದರೆ, ಕುರುಡಾಗಿದ್ದರೆ ಅಥವಾ ಬೇರೆ ಯಾವ ಅಂಗವಿಕಲತೆಗೆ ಒಳಗಾಗಿದ್ದರೆ, ನಿಮ್ಮ ದೇವರಾದ ಯೆಹೋವನಿಗೆ ಅವುಗಳನ್ನು ಸಮರ್ಪಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದರಲ್ಲಿ ಏನಾದರೂ ಊನವಿದ್ದರೆ ಅಂದರೆ, ಅದು ಕುಂಟಾಗಲಿ, ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾಗಿದ್ದರೆ, ಅದನ್ನು ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:21
6 ತಿಳಿವುಗಳ ಹೋಲಿಕೆ  

ಕುಂದು ಕೊರತೆಯಾಗಲಿ ಯಾವ ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವದು ಆತನಿಗೆ ಅಸಹ್ಯವಾಗಿದೆ.


ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.


ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಗಳನ್ನೂ ಸಮರ್ಪಿಸಬೇಕು; ಈ ಪಶುಗಳು ಪೂರ್ಣಾಂಗವಾಗಿಯೇ ಇರಬೇಕು.


ನೀವು ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು