Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:3 - ಕನ್ನಡ ಸತ್ಯವೇದವು J.V. (BSI)

3 ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟದ್ದನ್ನು ಕೇಳಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟದ್ದನ್ನು ಕೇಳಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಾಲಗಾರನು ಪರದೇಶಿಯಾಗಿದ್ದರೆ ಅವನು ಸಾಲ ಹಿಂತಿರುಗಿಸಬೇಕು. ಆದರೆ ಇಸ್ರೇಲರಲ್ಲಿ ಯಾರಾದರೂ ನಿಮ್ಮಿಂದ ಸಾಲ ತೆಗೆದುಕೊಂಡಿದ್ದರೆ ಅದನ್ನು ವಜಾ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನ್ಯದೇಶದವರಿಂದ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದು. ಆದರೆ ಸ್ವದೇಶದವನಾದ ನಿಮ್ಮ ಸಹೋದರರು ಕೊಡಬೇಕಾದ ಸಾಲವನ್ನು ನೀವು ಮನ್ನಾಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:3
8 ತಿಳಿವುಗಳ ಹೋಲಿಕೆ  

ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಹೊಂದುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.


ಆದದರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ಒಂದೇ ಮನೆಯವರಂತಿರುವ ಕ್ರಿಸ್ತನಂಬಿಕೆಯುಳ್ಳವರಿಗೆ ಮಾಡೋಣ.


ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವದಿಲ್ಲ; ಮಗನು ಶಾಶ್ವತವಾಗಿ ಇರುವನು;


ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ನಡಿಸಬಾರದು; ಅವನಿಂದ ಬಡ್ಡಿಯನ್ನು ಕೇಳಬಾರದು.


ಹೇಗಂದರೆ ಯೆಹೋವನು ನೇವಿುಸಿದ ಬಿಡುಗಡೆಯ ಸಂವತ್ಸರವು ಬಂತೆಂದು ಪ್ರಕಟವಾದದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು; ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.


ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವದು ಪಾಪ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು