ಧರ್ಮೋಪದೇಶಕಾಂಡ 15:4 - ಕನ್ನಡ ಸತ್ಯವೇದವು J.V. (BSI)4-5 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವದರಿಂದ ನಿಮ್ಮಲ್ಲಿ ಬಡವರೇ ಇರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4-5 “ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ, ಸರ್ವೇಶ್ವರ ನಿಮಗೆ ಸ್ವದೇಶವಾಗಿ ಕೊಡುವ ನಾಡಿನಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವರು. ಈ ಕಾರಣ, ನಿಮ್ಮಲ್ಲಿ ಬಡವರೇ ಇರುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿಮ್ಮ ದೇಶದಲ್ಲಿ ಯಾರೂ ಬಡವರಾಗಿರಬಾರದು. ಯಾಕೆಂದರೆ ಯೆಹೋವನೇ ನಿಮಗೆ ಈ ದೇಶವನ್ನು ಕೊಡುತ್ತಿದ್ದಾನೆ; ಮತ್ತು ಯೆಹೋವನು ನಿಮ್ಮನ್ನು ಅಧಿಕವಾಗಿ ಆಶೀರ್ವದಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದಲ್ಲಿ ಯೆಹೋವ ದೇವರು ನಿಮ್ಮನ್ನು ಬಹಳವಾಗಿ ಆಶೀರ್ವದಿಸುವರು. ಹೀಗಾಗಿ ನಿಮ್ಮಲ್ಲಿ ಬಡವರೇ ಇರುವುದಿಲ್ಲ. ಅಧ್ಯಾಯವನ್ನು ನೋಡಿ |