ಧರ್ಮೋಪದೇಶಕಾಂಡ 15:7 - ಕನ್ನಡ ಸತ್ಯವೇದವು J.V. (BSI)7 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನ ಬಗ್ಗೆ ಮನಸ್ಸನ್ನು ಕಠಿಣಮಾಡಿಕೊಳ್ಳಬೇಡಿ. ಅವನಿಗೆ ಸಹಾಯಮಾಡದೆ ಇರಬೇಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ಒಂದುವೇಳೆ ನಿಮ್ಮ ಮಧ್ಯದಲ್ಲಿ ಒಬ್ಬ ಬಡವನಿರಬಹುದು. ನೀವು ಸ್ವಾರ್ಥರಾಗಿ, ಅವನಿಗೆ ಸಹಾಯಮಾಡಲು ನಿರಾಕರಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ನಿಮ್ಮ ದೇಶದಲ್ಲಿ, ನಿಮ್ಮ ಸಹೋದರರಲ್ಲಿ ಬಡವರು ಇದ್ದರೆ, ನಿಮ್ಮ ಹೃದಯವನ್ನು ಕಠಿಣ ಮಾಡಿಕೊಳ್ಳಬೇಡಿರಿ. ನಿಮ್ಮ ಕೈಯನ್ನು ನಿಮ್ಮ ಬಡ ಸಹೋದರರಿಗೆ ಮುಚ್ಚಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿ |