ಧರ್ಮೋಪದೇಶಕಾಂಡ 16:1 - ಕನ್ನಡ ಸತ್ಯವೇದವು J.V. (BSI)1 ನೀವು ಚೈತ್ರಮಾಸದಲ್ಲಿ ಪಸ್ಕ ಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದಲ್ಲಿಯೇ ರಾತ್ರಿಕಾಲದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಲ್ಲವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಅಬೀಬ್ ತಿಂಗಳನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆ ತಿಂಗಳಲ್ಲಿ ನಿಮ್ಮ ದೇವರಾದ ಯೆಹೋವನನ್ನು ಗೌರವಿಸುವುದಕ್ಕಾಗಿ ಪಸ್ಕಹಬ್ಬವನ್ನು ಆಚರಿಸಬೇಕು. ಯಾಕೆಂದರೆ ಆ ತಿಂಗಳಲ್ಲೇ ನಿಮ್ಮ ದೇವರಾದ ಯೆಹೋವನು ರಾತ್ರಿಯಲ್ಲಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೀವು ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಾತ್ರಿಯಲ್ಲಿ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು. ಅಧ್ಯಾಯವನ್ನು ನೋಡಿ |