Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:16 - ಕನ್ನಡ ಸತ್ಯವೇದವು J.V. (BSI)

16 ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿಯೂ ಪಂಚಾಶತ್ತಮದಿನದ ಜಾತ್ರೆಯಲ್ಲಿಯೂ ಪರ್ಣಶಾಲೆಗಳ ಜಾತ್ರೆಯಲ್ಲಿಯೂ ಅಂತು ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:16
29 ತಿಳಿವುಗಳ ಹೋಲಿಕೆ  

ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.


ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆಹಾ, ಸ್ವಲ್ಪ ಮಾತ್ರ ಸಿಕ್ಕಿತು; ನೀವು ಮನೆಗೆ ತೆಗೆದುಕೊಂಡು ಬಂದಾಗ ನಾನು ಅದರ ಮೇಲೆ ಉಸುರುಬಿಟ್ಟೆನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಹಾಳುಬಿದ್ದಿದೆ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.


ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು.


ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ ಬದಲು ಕೊಟ್ಟು ಬಿಡಿಸಲೇಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.


ಅನಂತರ ಸೊಲೊಮೋನನು ವಿುಲ್ಲೋಕೋಟೆಯನ್ನು ಕಟ್ಟಿಸಿದನು. ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರುಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಸುಡುತ್ತಿದ್ದನು. ದೇವಾಲಯವನ್ನು ಕಟ್ಟಿಸಿ ತೀರಿಸಿದನು.


ಅವಳ ವ್ಯಾಪಾರವೂ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವದು; ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲಿಸುವದು.


ಅವರು ಅವನನ್ನು ಹಿಡುಕೊಂಡು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.


ಪರ್ಣಶಾಲೆಗಳ ಹಬ್ಬವೆಂಬ ಯೆಹೂದ್ಯರದೊಂದು ಜಾತ್ರೆಯು ಸಮೀಪವಾದಾಗ


ನಾನು ನಿಮ್ಮ ಎದುರಿನಿಂದ ಅನ್ಯಜನಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ಅಷ್ಟೇ ಅಲ್ಲದೆ ನೀವು ವರುಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂವಿುಯನ್ನು ಅಪಹರಿಸುವದಕ್ಕೆ ಅಪೇಕ್ಷಿಸುವದಿಲ್ಲ.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.


ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲವಾಗಿ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.


ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯನುಸಾರ ಕೊಡಬೇಕು.


ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲ್ಯರೆಲ್ಲರು ಆತನ ಸನ್ನಿಧಿಗೆ ಕೂಡಿ ಬಂದಾಗ ನೀವು ಅವರೆಲ್ಲರಿಗೂ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.


ಅವನು ಪ್ರತಿವರುಷವೂ ಸೈನ್ಯಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯ ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.


ನೀವು ಇಸ್ರಾಯೇಲ್‍ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ; ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿದ್ದದ್ದಕ್ಕೆ ಕಾರಣವು ಗೊತ್ತಾಗುವದು ಎಂದು ಹೇಳಿದರು.


ಯೆಹೋವನ ಯಜ್ಞವೇದಿಯ ಮೇಲೆ ಮೋಶೆಯ ಆಜ್ಞೆಯಂತೆ ಸಬ್ಬತ್ ದಿವಸ, ಅಮಾವಾಸ್ಯೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆ, ಪಂಚಾಶತ್ತಮದಿನದ ಜಾತ್ರೆ, ಪರ್ಣಶಾಲೆಗಳ ಜಾತ್ರೆ ಎಂಬೀ ಮೂರು ವಾರ್ಷಿಕಜಾತ್ರೆಗಳಲ್ಲಿಯೂ ಆಯಾ ದಿವಸಗಳಿಗೆ ನೇಮಕವಾದ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಿದ್ದನು.


ಈ ನಿಯಮದ ಪ್ರಕಾರ ಆ ಪರ್ಣಶಾಲೆಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ, ಕಾಡು ಒಲೀವ, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರುವ ಹಾಗೆ ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇವಿುನಲ್ಲಿಯೂ ಡಂಗುರದಿಂದ ಪ್ರಕಟಿಸಬೇಕು ಎಂಬದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು.


ಅವರು ಹೆಚ್ಚುಹೆಚ್ಚಾಗಿ ಬಲಹೊಂದಿ ಚೀಯೋನ್‍ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ -


ಕುಲಗಳು ಅಂದರೆ ಯಾಹುವಿನ ಕುಲದವರು ಯೆಹೋವನ ನಾಮಕೀರ್ತನೆಗೋಸ್ಕರ ಇಲ್ಲಿಗೇ ಯಾತ್ರೆಮಾಡುತ್ತಿದ್ದರು. ಇದು ಇಸ್ರಾಯೇಲ್ಯರಲ್ಲಿದ್ದ ಕಟ್ಟಳೆಯಷ್ಟೆ.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ಯರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇವಿುಗೆ ಕೂಡಿಬಂದರು.


ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು ಅನ್ನುತ್ತಾರೆ. ಸೆಲಾ.


ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ; ಯೆರೂಸಲೇಮು ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.


ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇವಿುಗೆ ಬಂದು ಸೇರುವ ಹಿಂಡಿನ ಹಾಗೆ ಮನುಷ್ಯರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು