Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:21 - ಕನ್ನಡ ಸತ್ಯವೇದವು J.V. (BSI)

21 ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ ಯಾವ ವಿಧವಾದ ಮರದ ಅಶೇರವೆಂಬ ವಿಗ್ರಹ ಸ್ತಂಭವನ್ನೂ ನೆಡಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ನೀವು ಕಟ್ಟಿಸಿಕೊಳ್ಳುವ ಬಲಿಪೀಠದ ಬಳಿ ಅಶೇರವೆಂಬ ವಿಗ್ರಹಸ್ತಂಭವನ್ನು, ಅದು ಯಾವ ವಿಧವಾದ ಮರದಿಂದ ಮಾಡಿರಲಿ, ಅದನ್ನು ನೆಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ಕಟ್ಟುವಾಗ ಅದರ ಪಕ್ಕದಲ್ಲಿ ಅಶೇರ್ ದೇವತೆಗೆ ಗೌರವವನ್ನು ತರುವಂಥ ಯಾವ ಮರದ ಕಂಬಗಳನ್ನು ನೆಡಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ಯೆಹೋವ ದೇವರಿಗಾಗಿ ಕಟ್ಟುವ ಬಲಿಪೀಠದ ಸಮೀಪದಲ್ಲಿ ಮರದಿಂದ ಮಾಡಿದ ಯಾವುದೇ ಅಶೇರ ಸ್ತಂಭವನ್ನು ನಿಲ್ಲಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:21
10 ತಿಳಿವುಗಳ ಹೋಲಿಕೆ  

ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರಿಗಿ ಸ್ಥಾಪಿಸಿ ಬಾಳ್‍ದೇವತೆಗಳಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಾನಗಳನ್ನು ತಿರಿಗಿ ಸ್ಥಾಪಿಸಿ ಇಸ್ರಾಯೇಲ್ಯರ ಅರಸನಾದ ಅಹಾಬನಂತೆ ಬಾಳನಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


[ಆದದರಿಂದ] ನೀವು ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಬಿಡಬೇಕು.


ಇದಲ್ಲದೆ ಅಶೇರವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದನು.


ಇನ್ನು ಏನೇನು ಸಂಭವಿಸುವದೋ! ಯೆಹೋವನು ಇಸ್ರಾಯೇಲ್ಯರನ್ನು ಹೊಡಿಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದದರಿಂದ ಆತನು ಅವರನ್ನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದರಿಸಿಬಿಡುವನು.


ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಆದದರಿಂದ ನೀವು ಹೀಗೆ ಮಾಡಬೇಕು - ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲಿನ ಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಕಲ್ಲುಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


ತಾನು ಮಾಡಿಸಿದ ಅಶೇರವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವದಾದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು