ಧರ್ಮೋಪದೇಶಕಾಂಡ 17:16 - ಕನ್ನಡ ಸತ್ಯವೇದವು J.V. (BSI)16 ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ. ಅಧ್ಯಾಯವನ್ನು ನೋಡಿ |