Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:17 - ಕನ್ನಡ ಸತ್ಯವೇದವು J.V. (BSI)

17 ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವದಕ್ಕೆ ಅವಕಾಶವಾಗುವದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಸರ್ವೇಶ್ವರನಿಗೆ ವಿಮುಖವಾಗಲು ಅವಕಾಶವಾಗುವುದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅರಸನಿಗೆ ಮಿತಿಮೀರಿ ಪತ್ನಿಯರು ಇರಬಾರದು. ಯಾಕೆಂದರೆ ಅವರು ಅರಸನನ್ನು ಯೆಹೋವನ ಮಾರ್ಗದಲ್ಲಿ ನಡೆಯದಂತೆ ಮಾಡಿ ಬೇರೆ ಕಡೆಗೆ ತಿರುಗಿಸುವರು. ರಾಜನು ಬೆಳ್ಳಿಬಂಗಾರಗಳನ್ನು ಶೇಖರಿಸಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅರಸನು ದಾರಿತಪ್ಪಿ ಹೋಗದಂತೆ ತನಗೆ ಹೆಚ್ಚು ಜನ ಹೆಂಡತಿಯರನ್ನು ಮದುವೆ ಮಾಡಿಕೊಳ್ಳಬಾರದು. ಅವನು ತನಗಾಗಿ ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:17
22 ತಿಳಿವುಗಳ ಹೋಲಿಕೆ  

ಅಂಥ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್‍ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ. ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ; ಅವನು ತನ್ನ ದೇವರಿಗೆ ವಿಶೇಷ ಪ್ರಿಯನು; ಆದದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ನೇವಿುಸಿದನು. ಆದರೂ ಅನ್ಯದೇಶಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ಅವರ ವಿಷಯದಲ್ಲಿ - ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ಹೇಳಿದನೆಂಬದಾಗಿ ನೀವು ಓದಲಿಲ್ಲವೋ?


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರು ಒಂದೇ ಶರೀರವಾಗಿರುವರು.


ಪರಮಾತ್ಮಾಂಶನಾದ ಯಾವನೂ ಹೀಗೆ ಮಾಡಲಿಲ್ಲ; ಆ ಪ್ರಸಿದ್ಧನೊಬ್ಬನು ಏಕೆ ಇಂಥ ಕೃತ್ಯಮಾಡಿದನು? ದೇವರ ವರವಾದ ಸಂತಾನವನ್ನು ಹಾರೈಸಿಯೇ. ಹೀಗಿರಲು ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ಯಾವನೂ ತನ್ನ ಯೌವನದ ಪತ್ನಿಗೆ ದ್ರೋಹಮಾಡದಿರಲಿ.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ಐಶ್ವರ್ಯವಂತರಾಗಬೇಕೆಂದು ಮನಸ್ಸು ಮಾಡುವವರು ದುಷ್ಪ್ರೇರಣೆಯೆಂಬ ಉರ್ಲಿನಲ್ಲಿ ಸಿಕ್ಕಿಕೊಂಡು ಬುದ್ಧಿವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರನಾಶನಗಳಲ್ಲಿ ಮುಳುಗಿಸುತ್ತವೆ.


ಜನರಿಗೆ - ಎಲ್ಲಾ ಲೋಭಕ್ಕೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು;


ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.


ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲವಾದದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.


ದಾವೀದನು ಹೆಬ್ರೋನಿನಿಂದ ಯೆರೂಸಲೇವಿುಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣುಮಕ್ಕಳು ಹುಟ್ಟಿದರು.


ಯೆಹೋವನಾದ ನನ್ನ ಮಾತನ್ನು ಕೇಳು - ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿದಿ;


ಅವನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಯು ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು.


ಅವನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಬಂಗಾರವು ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು.


ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.


ನಿನ್ನ ತ್ರಾಣವನ್ನು ಸ್ತ್ರೀಯರಲ್ಲಿ ಒಪ್ಪಿಸದಿರು, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ.


ದಾವೀದನು ಯೆರೂಸಲೇವಿುನಲ್ಲಿ ಸಹ ಕೆಲವು ಮಂದಿ ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು